ಅಮಿತ್ ಶಾ ಪರಿಶ್ರಮ ಜೀವಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲು ಇವರೇ ಕಾರಣ- ಸಿಎಎ ಪರ ಜನಜಾಗೃತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಹೇಳಿಕೆ…

Promotion

ಹುಬ್ಬಳ್ಳಿ,ಜ,18,2020(www.justkannada.in): ಅಮಿತ್ ಶಾ ಅವರು ಪರಿಶ್ರಮ ಜೀವಿ. ಅವರ ಪರಿಶ್ರಮ ಎಲ್ಲರಿಗೂ ಸ್ಪೂರ್ತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶೀ ತಿಳಿಸಿದರು.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಆಯೋಜಿಸಿರುವ ಸಿಎಎ ಪರ ಜನಜಾಗೃತಿ ಸಮಾವೇಶವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದರು. ನಂತರ ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ನಾಯಕರು ಸನ್ಮಾನ ನೆರವೇರಿಸಿದರು. ಸಮಾವೇಶದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ಸಚಿವ ಜಗದೀಶ್ ಶೆಟ್ಟರ್, ಶ್ರೀರಾಮುಲು ಸೇರಿ ಹಲವು ಮಂದಿ ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ವಿಶ್ವದ ದೊಡ್ಡ ಪಕ್ಷ. ಇದಕ್ಕೆ ಅಮಿತ್ ಶಾ ಅವರೇ ಕಾರಣ. ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲು ಅಮಿತ್ ಶಾ ಕಾರಣ.  ಅಮಿತ್ ಶಾ ಅವರು ಪರಿಶ್ರಮ ಜೀವಿ. ಅವರ ಪರಿಶ್ರಮ ಎಲ್ಲರಿಗೂ ಸ್ಪೂರ್ತಿ. ತ್ರಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರಲು ಅಮಿತ್ ಶಾ ಕಾರಣ ಎಂದು ಕೊಂಡಾಡಿದರು.

Key words: hubbli-bjp president-Amit Shah – BJP -Prahlad Joshi.