ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ ಸ್ವಾಗರ್ಹ: ಆದಷ್ಟು ಬೇಗ ಸಿಎಎ ಕಾಯ್ದೆ ಜಾರಿ ಎಂದ ಸಿಎಂ ಬಿಎಸ್ ಯಡಿಯೂರಪ್ಪ…

kannada t-shirts

ಹುಬ್ಬಳ್ಳಿ,ಡಿ,18,2019(www.justkannada.in):  ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲುಶಿಕ್ಷೆ ತೀರ್ಪು ಮರುಪರಿಶೀಲನೆ ಮಾಡುವಂತೆ ಅಪರಾಧಿ ಅಕ್ಷಯ್ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಮಾಡಿ ಮರಣದಂಡನೆ ಖಾಯಂಗೊಳಿಸಿದ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ ಸ್ವಾಗರ್ಹ. ಅಪರಾಧಿಯ ಅರ್ಜಿ ವಜಾಗೊಳಿಸಿದ್ದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಸಿಎಂ ಬಿ.ಎಸ್. ಯಡಿಯೂಪ್ಪ,  ರಾಜ್ಯದಲ್ಲಿ ಪೌರತ್ವ ಕಾಯ್ದೆಯನ್ನ ಜಾರಿಗೆ ತರುತ್ತೇವೆ. ಅದರಲ್ಲಿ ಯಾವುದೇ ಡೌಟ್ ಬೇಡ. ಆದಷ್ಟು ಬೇಗ ಸಿಎಎ ಕಾಯ್ದೆ ಜಾರಿಯಾಗುತ್ತೆ ಎಂದು ತಿಳಿಸಿದರು.

ಇನ್ನು ಮೊನ್ನೆ ನಡೆದ ಬೈ ಎಲೆಕ್ಷನ್ ನಲ್ಲಿ 12 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ಹೀಗಾಗಿ ಇನ್ನು ಮೂವರುವರೆ ವರ್ಷ ನಮ್ಮದೇ ಸರ್ಕಾರ ಇರುತ್ತೆ. ಇದೇ ತಿಂಗಳೂ ಅಂತ್ಯದಲ್ಲಿ ದೆಹಲಿಗೆ ಹೋಗಿ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತೇವೆ. ನಮಗೆ ಬೆಂಬಲ ನೀಡಿದವರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ. ಮುಂದಿನ ತಿಂಗಳು 2 ರಂದು ರಾಜ್ಯಕ್ಕೆ ಪ್ರಧಾನಿ ರಾಜ್ಯಕ್ಕೆ ಬರುತ್ತಿದ್ದಾರೆ. ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜನೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದರು.

ಹಾಗೆಯೇ ಮಹದಾಯಿ ನದಿ ವಿವಾದ ವಿಚಾರವಾಗಿ‌ ನಾನು ಮತ್ತೊಮ್ಮೆ ಕೇಂದ್ರ ಜೊತೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: hubbli-   CM BS Yeddyurappa – CAA Act -implemented – soon

website developers in mysore