ಹುಣಸೂರು ಉಪಚುನಾವಣೆ: ಫಲಿತಾಂಶಕ್ಕೂ ಮುನ್ನ ಸೋಲಿನ ಬಗ್ಗೆ ಭವಿಷ್ಯ ನುಡಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್….

ಮೈಸೂರು,ಡಿ,8,2019(www.justkannada.in): ನಾಳೆ ರಾಜ್ಯದ 15 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬೀಳಲಿದ್ದು ಅನರ್ಹಶಾಸಕರ ಭವಿಷ್ಯ ನಾಳೆ ಗೊತ್ತಾಗಲಿದೆ. ಈ ನಡುವೆ ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ಸೋಲಿನ ಬಗ್ಗೆ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದಿದ್ದಾರೆ.

ಹುಣಸೂರು ಕ್ಷೇತ್ರದ ಸೋಲು ಗೆಲುವಿನ ಬಗ್ಗೆ ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್, ಹೆಚ್. ವಿಶ್ವನಾಥ್ ಸೋತರೆ ಜಗತ್ತು ಮುಳುಗೋಗುತ್ತಾ?. ಸಿದ್ದರಾಮಯ್ಯ ಎಷ್ಟು ಸಲ ತೋಡೆ ತಟ್ಟಿ ಬಿದ್ದೋಗಿಲ್ಲ ಹೇಳಿ?. ಹುಣಸೂರು ಉಪಚುನಾವಣೆ ಸೋತರೂ ಏನು ಪರಿಣಾಮ ಬಿರೋಲ್ಲ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಜಯಗಳಿಸಲಿದ್ದಾರೆ. ಒಂದು ವೇಳೆ ವಿಶ್ವನಾಥ್ ಸೋತರೂ ಪ್ರಪಂಚ ಮುಳುಗಿ ಹೋಗುವುದಿಲ್ಲ. ಹುಣಸೂರು ಉಪಚುನಾವಣೆ ಸೋತರು ಏನು ಪರಿಣಾಮ ಬಿರೋಲ್ಲ ಎಂದು ನುಡಿದರು.

15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದೆ. ಮುಂದಿನ ಮೂರುವರೆ  ವರ್ಷ ಸರ್ಕಾರ ಸುಭದ್ರವಾಗಿರಲಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದವರು ಯಾವ ಕಾರಣಕ್ಕಾಗಿ ರಾಜೀನಾಮೆ ನೋಡಿದೆವು ಎಂದು ಜನರ ಮುಂದೆ ಹೇಳಿದ್ದೇವೆ. ಪ್ರತಿಪಕ್ಷಗಳು ಕೂಡ ತಮ್ಮ ನಿಲುವನ್ನು ಹೇಳಿವೆ. ಎಲ್ಲವನ್ನೂ ಜನರು ತೀರ್ಮಾನ ಮಾಡಿದ್ದಾರೆ. ನಾಳೆ ಫಲಿತಾಂಶ ಹೊರ ಬೀಳಲಿದೆ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯ ವೈಟ್ ವಾಶ್….

ನಾಳಿನ ಫಲಿತಾಂಶ ಎಲ್ಲರು ಕಾಯ್ತಿದ್ದಾರೆ. ಇದು ಜನತೆಗೆ ಬಿಟ್ಟ ವಿಚಾರ. ಅನರ್ಹರ ಬಗ್ಗೆ ಜನರ ಮನಸ್ಥಿತಿ ಏನಿದೆ ಅಂತ ನಾಳೆ ಗೊತ್ತಾಗಲಿದೆ. ಸರ್ಕಾರ ಸ್ಥಿರವಾಗಿದೆ ನಾಳೆ ಹೆಚ್ಚು ಗೆದ್ದು ಮತ್ತಷ್ಟು ಸ್ಥಿರ ಆಗಲಿದೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯ ವೈಟ್ ವಾಶ್ ಆಗ್ತಾರೆ. ಸೋಲುವವರ ಬಗ್ಗೆ ಈಗ ಮಾತನಾಡೋದು ಬೇಡ. ಗೆದ್ದವರೇಲ್ಲರಿಗು ಮಂತ್ರಿಭಾಗ್ಯ ಅಂತ ಸ್ವತಹ ಸಿಎಂ ಹೇಳಿದ್ದಾರೆ. ಬಿಜೆಪಿ ಅನರ್ಹರಿಗೆ ಕೊಟ್ಟ ಭರವಸೆ ಈಡೇರಿಸಲಿದೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು. ಹೆಚ್. ವಿಶ್ವನಾಥ್ ಬಿಜೆಪಿಗೆ ಬರಲು ಶ್ರೀನಿವಾಸ್ ಪ್ರಸಾದ್ ಪ್ರಮುಖ ಕಾರಣರಾಗಿದ್ದರು.

Key words: hunsur-by-election-BJP MP -Srinivas Prasad –predicts- defeat