ಗುಲಾಬ್ ಚಂಡಮಾರುತ: ಕರ್ನಾಟಕದ ಕರಾವಳಿ ಸೇರಿ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 26, 2021 (www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಭಾರಿ ಮಳೆ ಸಾಧ್ಯತೆ ಇದೆ.

ಯುಭಾರ ಕುಸಿತದಿಂದಾಗಿ ಕುಸಿತದ ಪರಿಣಾಮ ಕರ್ನಾಟಕದಲ್ಲೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತವನ್ನು ಗುಲಾಬ್ ಎಂದು ಹೆಸರಿಸಲಾಗಿದೆ. ಗುಲಾಬ್​ ಚಂಡಮಾರುತದ ವೇಗ ಗಂಟೆಗೆ 70-80 ಕಿ.ಮೀ. ಇರಲಿದೆ. ಕಾಳಿಂಗಪಟ್ಟಣಂ, ವಿಶಾಖಪಟ್ಟಣಂ ಮತ್ತು ಗೋಪಾಲಪುರಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್​ 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇಂದಿನಿಂದ 2 ದಿನ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

‘ಗುಲಾಬ್‌’ ಚಂಡಮಾರುತದ ಪ್ರಭಾವದಿಂದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಹಗುರದಿಂದ ಸಾಧಾರಣವಾಗಿ ಮಳೆಯಾಗಿದ್ದು, ರಾತ್ರಿ ಗಾಳಿ ಸಹಿತ ಜೋರು ಮಳೆಗೆ ಸಂಜಯನಗರದಲ್ಲಿ ಒಂದು ಮರ ಉರುಳಿ ಬಿದ್ದಿದೆ.

key words: Hurricane: Heavy rainfall expected across the coastal Karnataka