ಪತಿ ಪತ್ನಿ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ: ಈ ಬಗ್ಗೆ ಸರ್ಕಾರ ಮಟ್ಟದಲ್ಲಿ ಪ್ರಯತ್ನ-ಡಿಜಿ &ಐಜಿಪಿ ಪ್ರವೀಣ್ ಸೂದ್.

ಬೆಂಗಳೂರು,ಅಕ್ಟೋಬರ್,31,2022(www.justkannada.in): ಪೊಲೀಸ್ ಕಾನ್ಸ್ ಟೇಬಲ್ ಆಗಿರುವ ಪತಿ ಪತ್ನಿ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವ ಬಗ್ಗೆ ಸರ್ಕಾರ ಮಟ್ಟದಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರವೀಣ್ ಸೂದ್ ಅವರು, ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ. ಪತಿ ಪತ್ನಿ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ  ಕೊಡುವ ಬಗ್ಗೆ ಸರ್ಕಾರ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ. ಪೊಲೀಸ್ ಇಲಾಖೆಯಲ್ಲಿ ದಂಪತಿ  36 ವರ್ಷಗಳ ಕಾಲ ಬೇರೆ ಇರಲಾಗುವುದಿಲ್ಲ.  ಕಾನ್ಸ್ ಟೇಬಲ್ ಗಳ ನಿಜವಾದ ಸಮಸ್ಯೆ ಇದು. 7 ವರ್ಷಗಳ ನಂತರ ಡಿವಿಷನ್ ಬದಲಾವಣೆ ಮಾಡಬೇಕು ಎಂದರು.

ಕೆ.ಆರ್ ಪುರಂ ಇನ್ಸ್ ಪೆಕ್ಟರ್ ನಂದೀಶ್  ಸಾವಿನ ಬಗ್ಗೆ ತನಿಖೆ ನಡೆಸಲು ಸಿಎಂ ಸೂಚಿಸಿದ್ದಾರೆ. ಈ ಬಗ್ಗೆ ನಾವು ಇಲಾಖಾ ಮಟ್ಟದಲ್ಲಿ ತನಿಖೆ ಮಾಡುತ್ತೇವೆ. ಪ್ರಕರಣದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಪ್ರವೀಣ್ ಸೂದ್ ತಿಳಿಸಿದರು.

Key words: Husband – wife – allowed duty – same station-DG & IGP -Praveen Sood