ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮ ಹುಷಾರ್…!! : ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್ 

Promotion

ಬೆಂಗಳೂರು,ನವೆಂಬರ್,07,2020(www.justkannada.in) : ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್…!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.jk-logo-justkannada-logoಶಾಲಾ-ಕಾಲೇಜು ಆರಂಭಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಬೇಕು

ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಸರಕಾರ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.Hushar-students-teachers-killed-hasty-decision-Former-CM HDK-tweet

key words : Hushar-students-teachers-killed-hasty-decision-Former-CM HDK-tweet