ನಾನೂ ಸಹ ಮಂತ್ರಿಗಿರಿಯ ಪ್ರಬಲ ಆಕಾಂಕ್ಷಿ: ರಾಜ್ಯದಲ್ಲಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ ಎಂದ ಶಾಸಕ ರೇಣುಕಾಚಾರ್ಯ…

Promotion

ದಾವಣಗೆರೆ,ಡಿ,16,2019(www.justkannada.in):  ರಾಜ್ಯದಲ್ಲಿ  ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ, ಮುಖ್ಯಮಂತ್ರಿ ಒಬ್ಬರೇ ಸಾಕು ಎಂದು  ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಾನೂ ಸಹ   ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ನಾನೂ ಸಹ ಮೂರು ಬಾರಿ ಶಾಸಕನಾಗಿದ್ದೇನೆ. ಯಾವುದೇ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಆದರೇ ಸಚಿವ ಸ್ಥಾನಕ್ಕಾಗಿ ಹಾದಿ ಬೀದಿಯಲ್ಲಿ ಕೇಳಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಡಿಎಂಸಿ ಸ್ಥಾನದ ಅಗತ್ಯವಿಲ್ಲ. ಈಗಾಗಲೇ ಮೂರು ಡಿಸಿಎಂ ಸ್ಥಾನಗಳನ್ನು ನೀಡಿದ್ದು ಗೊಂದಲಗಳು ಎದ್ದಿವೆ. ಆದ್ದರಿಂದ ಕೇವಲ ಸಿಎಂ ಅಷ್ಟೇ ಸಾಕು. ಕೇವಲ ಸಿಎಂ ಒಬ್ಬರೇ ಇದ್ದರೆ ಆಗ ಯಾವುದೇ ಭಿನ್ನಾಭಿಪ್ರಾಯ ಎದುರಾಗುವುದಿಲ್ಲ ಎಂದು ರೇಣುಕಾಚಾರ್ಯ ತಿಳಿಸಿದರು.

Key words: I am also – strong aspirant – minister- MLA- MP Renukacharya.