ನನಗೆ ಮಂತ್ರಿಯಾಗಲು ಮನಸ್ಸಿಲ್ಲ : ಸಿಎಂ ಆಗುವ ಕನಸು ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್….

Promotion

ವಿಜಯಪುರ,ಡಿಸೆಂಬರ್,25,2020(www.justkannada.in): ಮುಂದೆ ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು, ಆಗಬಾರದು ಅಂತೆಲ್ಲಿದೆ? ಹೀಗೆ ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಆಗುವ ಕನಸು ಬಿಚ್ಚಿಟ್ಟಿದ್ದಾರೆ.Teachers,solve,problems,Government,bound,Minister,R.Ashok

ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ, ನಾನು ಅದರಲ್ಲಿ ಇಲ್ಲ. ದಯವಿಟ್ಟು ಯತ್ನಾಳರ ಹೆಸರು ಇದೆ ಎಂದು ಸುದ್ದಿ ಹೊಡೆಯಬೇಡಿ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. ಮುಂದೆ ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು, ಆಗಬಾರದು ಅಂತೆಲ್ಲಿದೆ..? ಎಂದರು.i-dont-becoming-minister-mla-basanagowda-patil-yatna-becoming-cm

ಸಚಿವ ಸಂಪುಟ ವಿಸ್ತರಣೆ ಆಗುತ್ತೋ, ಪುನರ್ ರಚನೆಯಾಗುತ್ತೋ ಖಚಿತ ಮಾಹಿತಿ ಇಲ್ಲ. ನೀವು ಮಾಧ್ಯಮದವರೇ ಅದನ್ನ ಎಬ್ಬಿಸಿದ್ದೀರಿ, ನೀವು ಯಾವಾಗ್ಯಾವಾಗ ಯಾರ ಪರವಾಗಿ ಹೊಡಿತಿರೋ ಗೊತ್ತಿಲ್ಲ. ಎಲ್ಲವೂ ಗೋಡಾರ್ಥವಿದೆ, ಇದೆಲ್ಲದಕ್ಕೂ ಮಕರ ಸಂಕ್ರಮಣದಲ್ಲಿ ಐತಿಹಾಸಿಕವಾಗಿ ಬದಲಾವಣೆಗಳು ಆಗಲಿವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಸಂಕ್ರಮಣದ ಬಳಿಕ ಉತ್ತರಾಯಣ ಕಾಲ ಆರಂಭವಾಗಲಿದೆ.ಸೂರ್ಯ ಉತ್ತರ ಪಥದಿಂದ ಬರುತ್ತಾನೆ, ಈ ವೇಳೆ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗಲಿದೆ. ಕೇಂದ್ರ ಹೈಕಮಾಂಡ್ 100ಕ್ಕೆ 100ರಷ್ಟು ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತೆ ಎಂಬ ವಿಶ್ವಾಸವಿದೆ. ವಿಜಯಪುರ ಜಿಲ್ಲೆಗೆ ಇಷ್ಟುದಿನ ಆದ ಅನ್ಯಾಯಕ್ಕೆ ನ್ಯಾಯ ಕೊಡುವ ಕೆಲಸ ಕೇಂದ್ರ ಮಾಡಲಿದೆ. ರಿಮೋಟ್ ನಿಮ್ಮ ಬಳಿಯೇ(ಮಾಧ್ಯಮಗಳ) ಇವೆ, ಯಾವಾಗ ಯಾರನ್ನ ಹೊಗಳ್ತಿರೋ ಯಾವಾಗ ಯಾರನ್ನ ಮಣ್ಣಲ್ಲಿ ಇಡ್ತಿರೋ ಗೊತ್ತಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.

ENGLISH SUMMARY….

BJP MLA Basanagouda Patil Yatnal expresses his wish to become CM
Vijayapura, Dec. 25, 2020 (www.justkannada.in): “Nobody knows about their destiny. If becoming a Chief Minister is in my fate, I will be so. Why can’t I be a CM?! BJP MLA Basangouda Patil Yatnal has expressed his wish to become CM by saying these words in Vijayapura today.
Speaking to the press persons today, he said, “I won’t tell whether cabinet expansion will take place or not because I am not in it. Please don’t show that I am also on the list. I don’t want to become a Minister. I don’t know whether it is in my fate or not, but I think I may become a CM in the future,” he said.i-dont-becoming-minister-mla-basanagowda-patil-yatna-becoming-cm
“I don’t know whether there will be a cabinet expansion or reformation. You media people are showing it. But I think answers to all your questions will be available after Makara Sankranti,” he added.
Keywords: Basanagouda Patil Yatnal/ Minister/ Chief Minister/ cabinet expansion

Key words: I don’t- becoming – minister- MLA-Basanagowda Patil Yatna- becoming CM.