ಐಸಿಸಿ ಟಿ-20 ವಿಶ್ವಕಪ್ ವೇಳಾಪಟ್ಟಿ ಪ್ರಕಟ

Promotion

ಬೆಂಗಳೂರು, ಆಗಸ್ಟ್ 18, 2021 (www.justkannada.in): ಐಸಿಸಿ ಪುರುಷರ ಟಿ-20 ವಿಶ್ವಕಪ್‌ ಟೂರ್ನಿ ವೇಳಾಪಟ್ಟಿ ಪ್ರಕಟವಾಗಿದೆ.

ಈ ವರ್ಷ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಕ್ರೀಡಾಕೂಟದ ಟೈಮ್ ಟೇಬಲ್ ಅನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ಪ್ರಕಟಿಸಿದೆ.

ಬಿಸಿಸಿಐ ಆಯೋಜಕತ್ವದಲ್ಲಿ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ, ಅಬುಧಾಬಿಯ ಶೇಖ್‌ ಝಯೀದ್ ಕ್ರೀಡಾಂಗಣ, ಶಾರ್ಜಾ ಕ್ರೀಡಾಂಗಣ ಹಾಗೂ ಒಮಾನ್‌ ಕ್ರಿಕೆಟ್‌ ಅಕಾಡೆಮಿ ಮೈದಾನದಲ್ಲಿ 2021ರ ಅಕ್ಟೋಬರ್‌ 17ರಿಂದ ನವೆಂಬರ್‌ 14ರ ವರೆಗೂ ಟಿ-20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಗಳು ನಡೆಯಲಿವೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24ರಂದು ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ. ಅಕ್ಟೋಬರ್ 17ರಿಂದ ವಿಶ್ವಕಪ್ ಆರಂಭವಾಗಲಿದ್ದು, 23ರ ವರೆಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದೆ. ಬಾಂಗ್ಲಾದೇಶ, ಶ್ರೀಲಂಕಾ, ಐರ್ಲೆಂಡ್‌, ನೆದರ್​ಲ್ಯಾಂಡ್​, ಸ್ಕಾಟ್‌ಲೆಂಡ್‌, ನಮಿಬಿಯಾ, ಒಮಾನ್‌, ಪಪುವಾ ನ್ಯೂ ಗುನಿಯಾ ದೇಶಗಳು ಇದರಲ್ಲಿ ಆಡಲಿದೆ.