ಐಸಿಸಿ ಟೆಸ್ಟ್ ಚಾಂಪಿಯನ್’ಶಿಪ್ ಪಾಯಿಂಟ್ಸ್: 2ನೇ ಸ್ಥಾನದಲ್ಲಿ ಟೀಂ ಇಂಡಿಯಾ, ವಿಂಡೀಸ್’ಗೆ ಅಗ್ರ ಸ್ಥಾನ

ಬೆಂಗಳೂರು, ಆಗಸ್ಟ್ 18, 2021 (www.justkannada.in): ಐಸಿಸಿ ಟೆಸ್ಟ್ ಚಾಂಪಿಯನ್’ಶಿಪ್ ಹೊಸ ನಿಯಮದ ಪ್ರಕಾರ ಆಡಿದ ಪಂದ್ಯಗಳಲ್ಲಿ ಗೆದ್ದ ಪಂದ್ಯಗಳಿಗೆ ಅನುಸಾರವಾಗಿ ಶೇಕಡಾವಾರಿನಂತೆ ತಂಡಗಳು  ಪಡೆದುಕೊಳ್ಳಲಿವೆ.

ಇಂಗ್ಲೆಂಡ್  ವಿರುದ್ದದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಡ್ರಾ ಸಾಧಿಸುವ ಮೂಲಕ ಭಾರತ ಖಾತೆ ತೆರೆದಿತ್ತು. ಇದೀಗ ಲಾರ್ಡ್ಸ್​ ಟೆಸ್ಟ್​ನಲ್ಲಿ ಇಂಗ್ಲೆಂಡ್ ತಂಡ ಮಣಿಸುವ ಮೂಲಕ 12 ಅಂಕಗಳನ್ನು ಪಡೆದುಕೊಂಡಿದೆ.

ಈ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಒಟ್ಟು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದೆ.

ಪಾಕಿಸ್ತಾನ್ ವಿರುದ್ದದ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ವೆಸ್ಟ್ ಇಂಡೀಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯಗಳಿಂದ ಒಟ್ಟು 14 ಅಂಕ ಪಡೆದರೂ ಗೆಲುವಿನ ಶೇಕಡಾವಾರು (58.33%) ಲೆಕ್ಕಚಾರದಲ್ಲಿ ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟಿದೆ.