ಮೈಸೂರು ಜಿಲ್ಲೆಯ ಈ ಸ್ಥಳಗಳನ್ನ ಕೇಂದ್ರೀಕೃತ ಪ್ರವಾಸೋದ್ಯಮ ತಾಣವಾಗಿ ಗುರುತಿಸಲಾಗಿದೆ- ಸಚಿವ ಸಿಪಿ ಯೋಗೇಶ್ವರ್

ಮೈಸೂರು,ಫೆಬ್ರವರಿ,4,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಮೈಸೂರು ನಗರ ಬೈಲುಕುಪ್ಪೆ ನಂಜನಗೂಡು ಮತ್ತು ಸೋಮನಾಥಪುರವನ್ನು ಕೇಂದ್ರೀಕೃತ ಪ್ರವಾಸೋದ್ಯಮ ತಾಣವಾಗಿ ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿಪಿ ಯೋಗೇಶ್ವrf ವಿಧಾನಸಭೆಯಲ್ಲಿ ತಿಳಿಸಿದರು.jk

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎಸ್ .ಎ. ರಾಮದಾಸ್ ಪರವಾಗಿ ಶಾಸಕ ಬಿ.ಸಿ. ನಾಗೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಸಿ.ಪಿ ಯೋಗೇಶ್ವರ್, 2020 – 25ನೇ ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಕೇಂದ್ರೀಕೃತ ಪ್ರವಾಸೋದ್ಯಮ ತಾಣಗಳಾಗಿ ಗುರುತಿಸಿರುವುದಾಗಿ ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸಿ ತಾಣಗಳಲ್ಲಿ ಯಾತ್ರಿನಿವಾಸ ಶೌಚಾಲಯ ಕುಡಿಯುವ ನೀರು ಸಂಪರ್ಕ ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದರು.

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ಟೂರಿಸಂ ವಿಷನ್  ಗ್ರೂಪ್‌ ನಡಿ  65 ಕಾಮಗಾರಿಗಳನ್ನು ಮೈಸೂರು ಜಿಲ್ಲೆಯಲ್ಲಿ ಕೈಗೊಳ್ಳಲಾಗಿದೆ. 7122.50 ಲಕ್ಷ ರೂ.ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಂಡಿದ್ದು 3776.75 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.identified-central-tourism-destination-mysore-district-minister-cp-yogeshwar

ಮೈಸೂರು ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಹೆರಿಟೇಜ್ , ಸ್ವಾಸ್ತ್ಯ, ಶಿಕ್ಷಣ, ಪರಿಸರ ಪ್ರವಾಸೋದ್ಯಮವನ್ನು  ಉತ್ತೇಜಿಸಲಾಗುವುದು. ಈ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ದಿಮೆದಾರರಿಗೆ ಸಹಾಯಧನ ನೀಡಲು ಯೋಜನೆ ರೂಪಿಸಲಾಗಿದೆ. ತೆರಿಗೆ ವಿನಾಯಿತಿ ಸಹ ನೀಡಲಾಗುವುದು ಎಂದು ಸಚಿವ ಯೋಗೇಶ್ವರ್ ಹೇಳಿದರು.

Key words: identified – central tourism -destination – Mysore district – Minister -CP Yogeshwar