ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ : ಕಠಿಣ ಕ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಆಗ್ರಹ…

ಬೆಂಗಳೂರು,ಮೇ,4,2021(www.justkannada.in): ಕೊರೋನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗಿದ್ದು ಈ ಮಧ್ಯೆ ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್  ಮಾಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  ಗಂಭೀರ ಆರೋಪ ಮಾಡಿದ್ದಾರೆ.jk

ಇಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ  ಮಾಹಿತಿ ನೀಡಿದ ಸಂಸದ ತೇಜಸ್ವಿ ಸೂರ್ಯ, ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ. ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂಗೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡಲಾಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.illegal-bed-booking-bangalore-mp-tejasvi-surya

ಕೊರೋನಾ ಸೋಂಕಿನ ಯಾವುದೇ ಗುಣ ಲಕ್ಷಣ ಇಲ್ಲದಿರುವ ವ್ಯಕ್ತಿಯ ಹೆಸರಿಗೆ ಬೆಡ್ ನೋಂದಣಿ ಮಾಡಿ ಕೆಲವೇ ಕ್ಷಣಗಳಲ್ಲಿ ಅದೇ ಬೆಡ್ ಅನ್ನು ಹಣಕ್ಕಾಗಿ ಬೇರೆಯವರ ಹೆಸರಿಗೆ ನೋಂದಣಿ ಮಾಡಲಾಗುತ್ತಿದೆ. ಹೀಗಾಗಿ ಅವಶ್ಯಕತೆ ಇರುವವರಿಗೆ ಬೆಡ್ ಸಿಗದೆ ಹಣ ನೀಡಿದವರಿಗೆ ಬೆಡ್ ಸಿಗುತ್ತಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

Key words: Illegal- Bed- Booking – Bangalore- MP -Tejasvi Surya