ಕನ್ನಡ ಮಾಧ್ಯಮಕ್ಕೆ ಪೂರಕವಾದ ಶಿಕ್ಷಣ ನೀತಿ ಜಾರಿಗೊಳಿಸಿ- ಸಿಎಂಗೆ  ಟಿ.ಎಸ್.ನಾಗಾಭರಣ ಮನವಿ

ಬೆಂಗಳೂರು,ಆಗಸ್ಟ್,29,2020(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿ-2020 ರನ್ವಯ ರಾಜ್ಯದಲ್ಲಿ ಕನ್ನಡ ಮಾಧ್ಯಮಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.jk-logo-justkannada-logo

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ರಾಜ್ಯ ಭಾಷೆ / ಪ್ರಾದೇಶಿಕ ಭಾಷೆಯನ್ನು ಶಿಕ್ಷಣದ ಎಲ್ಲಾ ಹಂತಗಳಲ್ಲಿ (ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ) ಕಡ್ಡಾಯ ಮಾಡುವುದರ ಮೂಲಕ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಸರ್ಕಾರ ಮುಂದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಒತ್ತಾಯ ಪೂರ್ವಕವಾಗಿ ಮನವಿ ಮಾಡಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯು ಜುಲೈ 29, 2020 ರಂದು ಸಚಿವ ಸಂಪುಟದ ಅನುಮೋದನೆ ಪಡೆದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಭಾಷಾ ಮಾಧ್ಯಮ ಮತ್ತು ಭಾಷಾ ಕಲಿಕೆಗೆ ಮಹತ್ವದ ಶಿಫಾರಸ್ಸುಗಳನ್ನು ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರು ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಹತ್ತು-ಹಲವು ಕ್ರಮಗಳಿಗೆ ಮುಂದಾಗಿದ್ದು ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಾರ್ಯಯೋಜನೆ ಸಿದ್ಧಪಡಿಸುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಹ ದಿನಾಂಕ:10.08.2020 ರಂದು ಪ್ರಾಧಿಕಾರದ ಅಧ್ಯಕ್ಷರಾದ  ಟಿ.ಎಸ್. ನಾಗಾಭರಣ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರ ನೂತನವಾಗಿ ಹೊರತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಶಿಕ್ಷಣದಲ್ಲಿ ಭಾಷಾ ಮಾಧ್ಯಮ, ಭಾಷಾ ಕಲಿಕೆ ಹಾಗೂ ಭಾಷಾ ಅಭಿವೃದ್ಧಿಗೆ ಸಂಬಂಧಿಸಿದ ಅಂಶಗಳನ್ನು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ತ್ವರಿತವಾಗಿ ಜಾರಿಗೊಳಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದು, ಪ್ರಸಕ್ತ ಸಾಲಿನಿಂದಲೇ ಜಾರಿಗೊಳಿಸಲು ಕ್ರಮವಹಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ಸರ್ಕಾರ ಈಗಾಗಲೇ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015 ಅನ್ನು 2017ರಿಂದ ಕಾಯಿದೆಯಾಗಿ ರೂಪಿಸಿ ಜಾರಿಗೆ ತರುವ ಮೂಲಕ ರಾಜ್ಯದಲ್ಲಿರುವ ಎಲ್ಲಾ ಪ್ರಕಾರದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿದೆ. ಉನ್ನತ ಶಿಕ್ಷಣದಲ್ಲಿ ಪ್ರೊ.ಹಿ.ಚಿ.ಬೋರಲಿಂಗಯ್ಯನವರ ವರದಿಯನ್ವಯ ಸಾಂಪ್ರದಾಯಿಕ (4 ಸೆಮಿಸ್ಟರ್) ಮತ್ತು ವೃತ್ತಿ ಶಿಕ್ಷಣದಲ್ಲಿ (2ಸೆಮಿಸ್ಟರ್) ಕನ್ನಡವನ್ನು ಒಂದು ಭಾಷೆಯಾಗಿ ಬೋಧಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಪದವಿ ಪೂರ್ವ ಶಿಕ್ಷಣ ಕ್ರಮ ಮಾತ್ರ ಇವರೆವಿಗೂ ಈ ಮಾದರಿಯ ಆದೇಶದಿಂದ ಹೊರಗುಳಿದಿತ್ತು. ಪ್ರಸ್ತುತ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದರಿಂದ ಪದವಿ ಪೂರ್ವ ಶಿಕ್ಷಣದಲ್ಲಿ 11 ಮತ್ತು 12ನೇ ತರಗತಿಯಲ್ಲೂ ಸಹ ಕನ್ನಡ ಮಾಧ್ಯಮದಲ್ಲಿ ಅಭ್ಯಾಿಸ ಮಾಡಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಬೋಧನೆ, ಪಠ್ಯಪುಸ್ತಕ ವಿತರಣೆ, ಮೌಲ್ಯಮಾಪನ ಮಾಡಲು ಅವಕಾಶ ನೀಡುವ ಸಂಬಂಧ ಅಗತ್ಯ ಕ್ರಮವಹಿಸಬೇಕು. ಪದವಿ ತರಗತಿಗಳಲ್ಲಿ ಕಡ್ಡಾಯವಾಗಿ ಎಲ್ಲಾ ಸೆಮಿಸ್ಟಾರ್ ಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಅವಕಾಶ ಕಲ್ಪಿಸಬೇಕಿದೆ. ಅಲ್ಲದೆ ಕನ್ನಡ ಮಾಧ್ಯಮದಲ್ಲೂ ಅವಕಾಶ ನೀಡಬೇಕಿದೆ. ವೃತ್ತಿ ಶಿಕ್ಷಣದಲ್ಲಿ ಸ್ವಾಯತ್ತ, ಖಾಸಗಿ, ಡೀಮ್ಡ್ ಇನ್ ವಿಶ್ವವಿದ್ಯಾಲಯ, ವೈದ್ಯಕೀಯ, ಇಂಜನಿಯರಿಂಗ್, ಕಾನೂನು, ಕೃಷಿ, ತೋಟಗಾರಿಕೆ, ನರ್ಸಿಂಗ್ ಇತ್ಯಾದಿ ಪದವಿಗಳಲ್ಲಿ ಎಲ್ಲಾ ಸೆಮಿಸ್ಟರ್ ಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಕ್ರಮವಹಿಸಬೇಕಾಗಿದೆ. ಇದಕ್ಕೆ ಪೂರಕವಾಗಿ ಅವುಗಳನ್ನು ಆಯಾ ವೃತ್ತಿಪರ ವಿಶ್ವವಿದ್ಯಾಲಯಗಳಡಿ ತರುವ ಮೂಲಕ ಅಲ್ಲಿ ಕನ್ನಡ ಭಾಷೆಯನ್ನು ಅನುಷ್ಠಾನಗೊಳಿಸಬೇಕಿದೆ. ಅಲ್ಲದೆ ಹೊಸ ಶಿಕ್ಷಣ ನೀತಿಯನ್ವಯ ಕನ್ನಡ ಭಾಷಾ ವಿಭಾಗವನ್ನು ತೆರೆಯಲು ಅವಕಾಶ ಕಲ್ಪಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.Implement -education policy - Kannada –media-TS Nagabharana -appeal

ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ಗಮನ ಸೆಳೆಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಉನ್ನತಮಟ್ಟದ ನಿಯೋಗಗಳು ನವದೆಹಲಿಗೆ ಭೇಟಿ ನೀಡಿ ಸಂಬಂಧಿಸಿದ ಮಂತ್ರಾಲಯಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೂ ಮನವಿ ಪತ್ರಗಳನ್ನು ಸಲ್ಲಿಸಿರುವ ಬಗ್ಗೆ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ರಾಜ್ಯ ಸರ್ಕಾರ ತನ್ನ ಮಾತೃಭಾಷೆಯಾದ ಕನ್ನಡದಲ್ಲಿ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸುಮಾರು 20 ವರ್ಷಗಳಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳನ್ನು ಮಾಡುತ್ತಾ ಬಂದಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ಗಮನ ಸೆಳೆಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಉನ್ನತಮಟ್ಟದ ನಿಯೋಗಗಳು  ನವದೆಹಲಿಗೆ ಭೇಟಿ ನೀಡಿ ಸಂಬಂಧಿಸಿದ ಮಂತ್ರಾಲಯಗಳ ಸಚಿವರು ಮತ್ತು  ಹಿರಿಯ ಅಧಿಕಾರಿಗಳಿಗೂ ಮನವಿ ಪತ್ರಗಳನ್ನು ಸಲ್ಲಿಸಿದ್ದು, ರಾಜ್ಯದಲ್ಲಿರುವ ಐ.ಸಿ.ಎಸ್.ಸಿ, ಸಿ.ಬಿ.ಎಸ್.ಸಿ, ಐ.ಬಿ, ರಾಜ್ಯ ಪಠ್ಯಕ್ರಮದ ಅಡಿಯಲ್ಲಿ ನೋಂದಾಯಿಸಿಕೊಂಡಿರುವ ಎಲ್ಲಾ ಶಾಲೆಗಳು ಕನಿಷ್ಠ 8ನೇ ತರಗತಿಯವರೆಗಾದರೂ ರಾಜ್ಯದಲ್ಲಿ ಶಿಕ್ಷಣ ಮಾಧ್ಯಮ ರಾಜ್ಯಭಾಷೆಯಲ್ಲಿರಬೇಕೆಂಬುದು ಜಗತ್ತಿನಾದ್ಯಂತ ಲಭ್ಯವಿರುವ ಭಾಷಾ ಸಂಶೋಧನೆಗಳು, ಯುನೆಸ್ಕೊ, ಭಾಷಾ ಮತ್ತು ಶಿಕ್ಷಣ ತಜ್ಞರ ನಿಲುವಾಗಿದೆ ಎಂದು ವಿವರಿಸಿದ್ದಾರೆ.

Key words: Implement -education policy – Kannada –media-TS Nagabharana -appeal