ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ: ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂ. ಅನುದಾನ ಮೀಸಲು…

Promotion

ನವದೆಹಲಿ,ಫೆ,1,2020(www.justkannada.in):  ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಉದ್ಯೋಗಾಧಾರಿತ ಕೋರ್ಸ್ ಗಳಿಗೆ ಆದ್ಯತೆ ನೀಡಲಾಗುವುದು. ಹೊಸ ಶಿಕ್ಷಣ ನೀತಿ ಶೀಘ್ರದಲ್ಲಿಯೇ ಘೋಷಣೆಯಾಗಲಿದೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ತರಬೇತಿ. 150 ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ನೀಡಲಾಗುವುದು. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್ ಲೈನ್ ಕೋರ್ಸ್. ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು. ಹೊಸದಾಗಿ ರಾಷ್ಟ್ರೀಯ ಪೊಲೀಸ್, ವಿಧಿವಿಜ್ಞಾನ ವಿವಿ ಸ್ಥಾಪನೆ. ಹೊಸ ವೈದ್ಯರ ಉತ್ತೇಜನಕ್ಕಾಗಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ. ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮದ ಪರಿಣಾಮಕಾರಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು . ಕೌಶಲಾಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಬಜೆಟ್ ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

Key words: implement -new -education policy-budget