ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಲಕ್ಷ್ಮಣ್ ಸವದಿ.

kannada t-shirts

ಬೆಂಗಳೂರು,ಜೂನ್, 10,2021(www.justkannada.in): ಸಾರ್ವಜನಿಕ ಸಾರಿಗೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ  ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ. ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದರೂ ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ.jk

ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ, ಇದರಲ್ಲಿ ಎರಡು ರೀತಿಯ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್ ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್ ಈ ಎರಡು ಟೆಕ್ನಾಲಜಿಗಳನ್ನು ವಾಹನಗಳಲ್ಲಿ ಅಳವಡಿಸಲಾಗುವುದು. ಇದರಿಂದ ನಮ್ಮ ಬಸ್ಸಿನ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು  ತಪ್ಪಿಸುವಂತಹ ಟೆಕ್ನಾಲಜಿ ಇದಾಗಿದೆ. ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್ ಗೆ ಮಾಹಿತಿ ರವಾನೆ ಮಾಡುತ್ತದೆ ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸ ಈ ಟೆಕ್ನಾಲಜಿಗಳು ಮಾಡುತ್ತವೆ.

ನಮಗೆ ನಮ್ಮ ಜನರ ಜೀವ ಮುಖ್ಯ ಇದರಿಂದಾಗಿ ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಕ್ನಾಲಜಿಯನ್ನು ಕರಾರಸಾ ನಿಗಮದ 1044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತನೆ ಮಾಡಿದೆ. ಪ್ರಯಾಣಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂದು  ಡಿಸಿಎಂ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

Key words: Implementation – AI technology – passenger -safety –KSRTC-vehicles-  DCM -Laxman Savadi.

website developers in mysore