ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ:  ಬಲವಂತವಾಗಿ ಬಂದ್ ಮಾಡಿಸಿದ್ರೆ ಕಾನೂನು ಕ್ರಮ – ಪೊಲೀಸ್ ಆಯುಕ್ತ ಬಿ.ದಯಾನಂದ್.

Promotion

ಬೆಂಗಳೂರು,ಸೆಪ್ಟಂಬರ್,28,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ, ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಲಿದ್ದು,  ಬಲವಂತವಾಗಿ ಬಂದ್ ಮಾಡಿಸಿದ್ರೆ ಕಾನೂನು ಕ್ರಮ  ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಬಿ.ದಯಾನಂದ್,  ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೆ ಬರಲಿದೆ.  ನಾಳೆ ಪ್ರತಿಭಟನೆ, ರ್ಯಾಲಿಗಳಿಗೆ ಅವಕಾಶವಿಲ್ಲ ಫ‍್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.  ಎಲ್ಲಾ ಸಂಘಟನೆಗಳಿಗ ಸೂಚನೆ ನೀಡಲಾಗಿದೆ ಎಂದರು.

ನಗರದ ಸೂಕ್ಷ್ಮಪ್ರದೇಶದಲ್ಲಿ ಹೆಚ್ಚಿನ ಭಧ್ರತೆ ವಹಿಸಲಾಗಿದೆ.  ಐದಕ್ಕಿಂತ ಹೆಚ್ಚು ಜನ ಓಡಾಡುವ ಆಗಿಲ್ಲ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

Key words: Implementation – Section 144 – Bengaluru- Karnataka bandh-Police Commissioner- B.Dayanand.