ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.

ಮೈಸೂರು,ಡಿಸೆಂಬರ್,1,2022(www.justkannada.in):  ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ. ನಮ್ಮ ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಬಿಜೆಪಿಗೆ ಲಾಭ ಆಗುತ್ತೋ ಬಿಡುತ್ತೋ ಅನ್ನೋ ಪ್ರಶ್ನೆ ಅಲ್ಲ. ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಾನು ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ದ. ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ ಎಂದರು.

ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅನುಮತಿ ನೀಡಲಿಲ್ಲ. ಮೇಕೆದಾಟುಗೆ ಅವಕಾಶ ಕೊಡದ ಮೋದಿ ಸಮುದ್ರಕ್ಕೆ ಹರಿಯುವ ನೀರು ಬಳಸಲು ಕೊಡ್ತಾರೆ. ತಮಿಳುನಾಡು ಸರ್ಕಾರ ಸಮುದ್ರಕ್ಕೆ ಹರಿಯುವ ಕಾವೇರಿ ನೀರು ಬಳಸೋಕೆ ಅನುಮತಿ ಕೊಟ್ಟಿದ್ದಾರೆ. ಸೇಲಂ ಜಿಲ್ಲೆ ಸೇರಿ ಆಸುಪಾಸಿನ ಜಿಲ್ಲೆಗಳಲ್ಲಿ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿಗೆ ಈ ನೀರು ಬಳಕೆಯಾಗುತ್ತಿದೆ. ತಮಿಳುನಾಡಿನ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಮುಂದಿನ‌ ದಿನಗಳಲ್ಲಿ ಎಐಎಡಿಎಂಕೆಗೆ ಅನುಕೂಲವಾಗಲಿ ಅಂತಾನೆ ಅಲ್ಲಿ ನೀರಾವರಿ ಯೋಜನೆಗೆ ಅನುಮತಿ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೆ ಬಿಡಲ್ಲ. ಮೇಕೆದಾಟು ವಿಚಾರವಾಗಿ ಬಹಳ ಹಿಂದೆ ಪ್ರಧಾನಿಗೆ ಪತ್ರ ಬರೆದಿದ್ದೆ. ಈ ಪತ್ರಕ್ಕೆ ಈ ತನಕ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ರಾಜ್ಯಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವೆ ಎಂದು ಎಚ್.ಡಿ.  ದೇವೇಗೌಡರು ತಿಳಿಸಿದರು.

Key words:  impossible – uniform civil code – country-Former PM-HD Deve Gowda-mysore