ಶಾಲಾ-ಕಾಲೇಜುಗಳ ಪ್ರಾರಂಭದ ಬಗ್ಗೆ ಯಾವುದೇ ನಿರ್ಧಾರ‌ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್

Promotion

ಬೆಂಗಳೂರು,ಸೆಪ್ಟೆಂಬರ್,29,2020(www.justkannada.in)  : ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

jk-logo-justkannada-logo

ಶಾಲಾ,ಕಾಲೇಜು ಆರಂಭ ಸಂಬಂಧಿಸಿದಂತೆ ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.  ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.Inauguration-School-Colleges-no-decision-yet-Minister-S.Suresh Kumar

ನಾನೀಗ ಸಧ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

key words : Inauguration-School-Colleges-no-decision-yet-Minister-S.Suresh Kumar