ಮೈಸೂರಿನಲ್ಲಿ ಸರ, ಬೈಕ್ ಕಳವು ಪ್ರಕರಣ ಹೆಚ್ಚಳ: ಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರ ಪ್ಲಾನ್

Promotion

ಮೈಸೂರು, ನವೆಂಬರ್ 7, 2021: ಮೈಸೂರಿನಲ್ಲಿ ಸರಗಳ್ಳತನ ಹಾಗೂ ಬೈಕ್ ಕಳ್ಳತನ ಹೆಚ್ಚಳ ಹಿನ್ನೆಲೆಯಲ್ಲಿ
ಕತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದಾರೆ.

ಇದಕ್ಕಾಗಿ ಮೈಸೂರು ಸಿಸಿಬಿ ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

ನಗರ ಪ್ರದೇಶದಲ್ಲಿ ಬೈಕ್ ಕಳ್ಳತನ ಗ್ರಾಮಾಂತರ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಪೊಲೀಸರು ಬೈಕ್ ಕಳ್ಳತನ ಪ್ರಕರಣ ಬೇಧಿಸಿ 10ಬೈಕ್ ವಶಪಡಿಸಿಕೊಂಡಿದ್ದರು.

ಸಿಸಿಬಿ ಪೊಲೀಸರ ವಿಶೇಷ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ನಂಬರ್ ಪ್ಲೇಟ್ ಹಾಕದೇ ಬರುವ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಎಚ್ಚರ ವಹಿಸುವಂತೆ ಡಾ ಚಂದ್ರಗುಪ್ತ ಮನವಿ ಮಾಡಿದ್ದಾರೆ.