ಕೆಆರ್ ಎಸ್ ಡ್ಯಾಂನಿಂದ ಹೊರ ಹರಿವು ಹೆಚ್ಚಳ: ಶ್ರೀರಂಗಪಟ್ಟಣ ವ್ಯಾಪ್ತಿಯ ದೇವಸ್ಥಾನಗಳು ಜಲಾವೃತ.

ಮಂಡ್ಯ,ಆಗಸ್ಟ್,4,2022(www.justkannada.in):  ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದ್ದು ನಿರಂತರವಾಗಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಈ ಮಧ್ಯೆ ಕೊಡಗು, ಮೈಸೂರು ಭಾಗದಲ್ಲಿ ವ್ಯಾಪಕ ವರ್ಷಧಾರೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂನಿಂದ ಹೊರಹರಿವು ಹೆಚ್ಚಾಗಿದ್ದು, ಕಾವೆರಿ ದಡದಲ್ಲಿರುವ ದೇವಸ್ಥಾನಗಳು ಮುಳುಗಡೆಯಾಗಿವೆ.  ಶ್ರೀರಂಗಪಟ್ಟಣ ವ್ಯಾಪ್ತಿಯ ಚಂದ್ರಮೌಳೇಶ್ವರ .ಅಷ್ಟಮಾತೆಯರ ದೇಗುಲ ಜಲಾವೃತವಾಗಿದೆ.

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ.

Key words: Increase – outflow -KRS Dam-Temples -around -Srirangapatna