ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಿತಿ 20 ಕ್ವಿಂಟಾಲ್ ಗೆ ಹೆಚ್ಚಳ- ಸಿಎಂ ಬಿಎಸ್ ವೈ ಘೋಷಣೆ….

Promotion

ಬೀದರ್, ಫೆ,7,2020(www.justkannada.in):  ಬೆಂಬಲ ಬೆಲೆಯಲ್ಲಿ ಖರೀದಿಸುವ ತೊಗರಿ ಬೆಳೆಯ ಮಿತಿಯನ್ನು 10 ರಿಂದ 20 ಕ್ವಿಂಟಾಲ್ ಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ಬೀದರ್ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪಶು ಮೇಳ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ, ರೈತರು ಬೆಂಬಲ ಬೆಲೆಯಲ್ಲಿ ಖರೀದಿಸುವ ತೊಗರಿ ಬೆಳೆಯ ಮಿತಿಯನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದು, ರೈತರ ಹಿತರಕ್ಷಣೆಗೆ ಹಾಗೂ ಆದಾಯ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಆದ್ದರಿಂದ ಈ ಮಿತಿಯನ್ನು 20 ಕ್ವಿಂಟಾಲ್ ಗಳಿಗೆ ಹೆಚ್ಚಿಸಲು ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಹರ್ಷ ವ್ಯಕ್ತ ಪಡಿಸಿದ ರೈತ ಮುಖಂಡರು ಸ್ಥಳದಲ್ಲೇ ಮುಖ್ಯಮಂತ್ರಿಗಳನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

Key words: Increase – purchase price -20 quintals – CM BS Yeddyurappa