ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ…

Promotion

ಬೆಂಗಳೂರು,ಮೇ,25,2021(www.justkannada.in):  ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ   ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.jk

ಮಾಧ್ಯಮಗಳ ಜತೆ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಹಳ್ಳಿಗಳಲ್ಲಿ ಕೊರೋನಾ 2ನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೇನ್ಮೆಂಟ್ ಮಾಡಲು  ನಿರ್ಧರಿಸಲಾಗಿದೆ. ಮೈಕ್ರೋ ಕಂಟೇನ್ಮೆಂಟ್ ನಲ್ಲಿ ಸಮಿತಿ ರಚನೆ ಮಾಡಲಾಗುವುದು. ಸಮಿತಿಯಲ್ಲಿ ಸ್ಥಳೀಯ ಪೊಲೀಸರು, ಅಧಿಕಾರಿಗಳು ಇರುತ್ತಾರೆ. ಕೊರೊನಾ ಸೋಂಕಿತರಿಗೆ ಔಷಧಿ ವಿತರಿಸಲು ಸಹಾಯ ಮಾಡುತ್ತಾರೆ. ಜನರ ಅನಗತ್ಯ ಓಡಾಟಕ್ಕೆ  ಬ್ರೇಕ್ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು. increased-coronavirus-rural-areas-micro-containment-home-minister-basavaraja-bommai

ಇಂದು ಸಂಜೆ ಸಿಎಂ ಬಿಎಸ್ ವೈ ಸಭೆ ನಡೆಸಲಿದ್ದು ಸಭೆಯಲ್ಲಿ ಕೊರೋನಾ ಸ್ಥಿತಿಗತಿ ಬಗ್ಗೆ ಚರ್ಚಸಲಾಗುತ್ತದೆ.  ಬ್ಲ್ಯಾಕ್ ಫಂಗಸ್ ನಿಯಂತ್ರಣದ ಬಗ್ಗೆಯೂ ಚರ್ಚಿಸುತ್ತೇವೆ. 2ನೇ ಅಲೆಯಲ್ಲಿ ಕೊರೋನಾ ವೇಗವಾಗಿ ಹರಡುತ್ತಿದೆ. ಹೀಗಾಗಿ ಸಾವಿನ ಪ್ರಮಾಣ ಹೆಚ್ಚಳವಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: increased- coronavirus- rural areas-Micro Containment-home minister-basavaraja bommai