ಜಿದ್ದಾಜಿದ್ದಿನ ಕಣ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಭೇರಿ…

Promotion

ಮಂಡ್ಯ,ಮೇ,23,2019(www.justkannada.in): ರಾಜ್ಯದಲ್ಲಿ  ಜಿದ್ಧಾಜಿದ್ದಿಗೆ ಕಾರಣವಾಗಿ ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಭೇರಿ ಬಾರಿಸಿದ್ದಾರೆ.

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್  ಗೆಲುವು ಸಾಧಿಸಿದ್ದಾರೆ. 90 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸುಮಲತಾ ಅಂಬರೀಶ್ ಜಯಭೇರಿ ಬಾರಿಸಿದ್ದು ಇದರಿಂದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಗೆ ತೀವ್ರ ಮುಖಭಂಗವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ಕ್ಷೇತ್ರದಲ್ಲೂ  ಜೆಡಿಎಸ್ ಭರ್ಜರಿ ಜಯ ದಾಖಲಿಸುವ ಮೂಲಕ ಮಂಡ್ಯ ಜೆಡಿಎಸ್ ಭದ್ರಕೋಟೆ ಎಂದು ಕರೆಸಿಕೊಂಡಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಹಿನ್ನೆಲೆ ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಆದರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್  ವಿರುದ್ದ ನಿಖಿಲ್ ಸೋಲನ್ನಪ್ಪಿದ್ದು ಈ ಮೂಲಕ ಮೊದಲಬಾರಿಗೆ ಸಂಸತ್ ಪ್ರವೇಶಿಸುವ ನಿಖಿಲ್ ಅವರ ಆಸೆಗೆ ತಣ್ಣೀರೆರೆಚಿದಂತಾಗಿದೆ.

Key words: Independent candidate Sumalata Ambarish won in Mandya Lok Sabha constituency

#election2019 #mandya #sumalathaambarish