ಇಂದು ಭಾರತ- ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯ: ಯಾರಿಗೆ ಬೇವು? ಯಾರಿಗೆ ಬೆಲ್ಲ?

Promotion

ಬೆಂಗಳೂರು, ಮಾರ್ಚ್ 22, 2023 (www.justkannada.in): ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ಆಟಗಾರರು ಮುಖಾಮುಖಿ ಆಗಲಿದ್ದಾರೆ.

ಭಾರತ ತಂಡ 5 ವಿಕೆಟ್‌ಗಳ ಜಯದೊಂದಿಗೆ ತನ್ನ ಏಕದಿನ ಸರಣಿ ಅಭಿಯಾನವನ್ನು ಆರಂಭಿಸಿತ್ತು. ಆದರೆ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಪುಟಿದೆದ್ದು ಆಲ್‌ರೌಂಡ್ ಪ್ರದರ್ಶನ ನೀಡಿತು. ಇದೀಗ ಮೂರನೇ ಪಂದ್ಯ ಸಾಕಷ್ಟು ಕೂತುಹಲ ಮೂಡಿಸಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ.