ಭಾರತ-ಚೀನಾ ಘರ್ಷಣೆ ವಿಚಾರ: ತುರ್ತು ಸಭೆ ಕರೆದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್.

Promotion

ನವದೆಹಲಿ,ಡಿಸೆಂಬರ್,13,2022(www.justkannada.in): ಗಡಿಯಲ್ಲಿ ಭಾರತ-ಚೀನಾ ಯೋಧರ ನಡುವೆ ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತುರ್ತು ಸಭೆ ಕರೆದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ತುರ್ತು ಸಭೆ ನಡೆಯಲಿದ್ದು, ವಿದೇಶಾಂಗ ಸಚಿವ ಜೈಶಂಕರ್ , ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವೆಲ್,   3 ಸೇನಾಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಪಾಲ್ಗೊಳ್ಳಲಿದ್ದಾರೆ. ರಾಜನಾಥ್ ಸಿಂಗ್ ಅವರು ಘರ್ಷಣೆ ಬಗ್ಗೆ  ಮಾಹಿತಿ ಪಡೆಯಲಿದ್ದಾರೆ.

ಭಾರತ-ಚೀನಾ ಘರ್ಷಣೆ ವಿಚಾರ ಸಂಸತ್ ನಲ್ಲೂ ಪ್ರತಿಧ್ವನಿಸಲಿದ್ದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಚಾರ ಪ್ರಸ್ತಾಪಿಸಲು ವಿಪಕ್ಷಗಳು ಸಜ್ಜಾಗಿವೆ.

ಅರುಣಾಚಲ ಪ್ರದೇಶದ ತವಾಂಗ್‌ ನಲ್ಲಿ ಡಿಸೆಂಬರ್​ 9ರಂದು  ಚೀನಾ ಹಾಗೂ ಭಾರತೀಯ ಸೇನಾ ಯೋಧರ ನಡುವೆ ಸಂಘರ್ಷ ನಡೆದಿತ್ತು.  ಘರ್ಷಣೆಯಲ್ಲಿ ಭಾರತ ಹಾಗೂ ಚೀನಾ ದೇಶದ ಯೋಧರು ಗಾಯಗೊಂಡಿದ್ದಾರೆ

Key words: India-China- conflict – Union Defense Minister -Rajnath Singh – emergency -meeting.