ಟೆಸ್ಟ್ ಚಾಂಪಿಯನ್ ಶಿಪ್ ಮೊದಲ ಸರಣಿ: ಇಂದಿನಿಂದ ಇಂಡಿಯಾ-ಇಂಗ್ಲೆಂಡ್ ಮೊದಲ ಪಂದ್ಯ

Promotion

ಬೆಂಗಳೂರು, ಆಗಸ್ಟ್ 4, 2021 (www.justkannada.in): ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಸರಣಿ ಇದಾಗಿದ್ದು, ಟ್ರೆಂಟ್ ಬ್ರಿಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತೀಯ ಕಾಲಮಾನ ಪ್ರಕಾರ ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ. ಭಾರತಕ್ಕೆ ಸರಣಿ ಆರಂಭಕ್ಕೂ ಮುನ್ನವೇ ಮಯಾಂಕ್ ಅಗರ್ವಾಲ್ ಗಾಯಗೊಂಡಿರುವುದು ಟೀಂ ಇಂಡಿಯಾಗೆ ತಲೆನೋವು ತಂದಿದೆ.

ಕಳೆದ ಬಾರಿ ಇಂಗ್ಲೆಂಡ್ ಪ್ರವಾಸದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜಾಗಿದೆ.