ಇಂದಿನಿಂದ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಶುರು

Promotion

ಬೆಂಗಳೂರು, ಸೆಪ್ಟೆಂಬರ್ 02, 2021 (www.justkannada.in): ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ.

ಇಂಗ್ಲೆಂಡ್ ನ ದಿ ಓವಲ್ ಮೈದಾನದಲ್ಲಿ ನಡೆಯುವ ಪಂದ್ಯ ಸಾಕಷ್ಟು  ಕುತೂಹಲ ಮೂಡಿಸಿದೆ. ಸರಣಿಯಲ್ಲಿ ಎರಡೂ ತಂಡಗಳು ಒಂದು ಡ್ರಾ, ತಲಾ ಒಂದು ಗೆಲುವಿನೊಂದಿಗೆ ಸರಣಿ ಸಮಬಲ ಸಾಧಿಸಿವೆ.

ಇನ್ನು ಪಂದ್ಯ ಆರಂಭವಾದ ಮೊದಲ ಮೂರು ದಿನಗಳ ಕಾಲ ಮಳೆಯಾಗುವ ಸಂಭವ ತೀರಾ ಕಡಿಮೆ ಇದೆ. ಪಂದ್ಯದ ನಾಲ್ಕನೇ ಮತ್ತು ಐದನೇ ದಿನ ಆಗಾಗ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ವರದಿ ಹೇಳಿದೆ.

ಓವಲ್ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ನೆಚ್ಚಿನದ್ದಾಗಿದೆ. ಇಲ್ಲಿ ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಉತ್ತಮ ರನ್ ಕಲೆ ಹಾಕುವುದು ಒಳ್ಳೆಯ ನಿರ್ಧಾರವಾಗಿರಲಿದೆ.