ನಾಳೆಯಿಂದ ಲೀಡ್ಸ್’ನಲ್ಲಿ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್

ಬೆಂಗಳೂರು, ಆಗಸ್ಟ್ 24, 2021 (www.justkannada.in): ಲೀಡ್ಸ್​’ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ನಡುವೆ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ.

ಭಾರತದ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3: ಪಂದ್ಯ 30ಕ್ಕೆ ಆರಂಭವಾಗಲಿದೆ. ಒಂಬತ್ತು ದಿನಗಳ ದೀರ್ಘ ವಿರಾಮದ ಬಳಿಕ ನಡೆಯುತ್ತಿದ್ದು, ಎರಡೂ ತಂಡಗಳ ಆಟಗಾರರು ಗೆಲುವಿಗಾಗಿ ಸಕಲ ತಯಾರಿ ನಡೆಸಿದ್ದಾರೆ.

ಇತ್ತ ಇಂಗ್ಲೆಂಡ್ ತಂಡಕ್ಕೆ ಆಟಗಾರರ ಗಾಯದ ಸಮಸ್ಯೆ ತಲೆನೋವಾಗಿ ಪರಿಣಮಿಸಿದ್ದು, ಮಾರ್ಕ್ ವುಡ್ ಈ ಪಂದ್ಯದಿಂದ ಹೊರಗುಳಿಯಬೇಕಾಗಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಮಳೆ ಕಾರಣದಿಂದ ಸುಲಭ ಗೆಲುವು ಕಳೆದುಕೊಂಡಿದ್ದ ಕೊಹ್ಲಿ ಪಡೆ, ಎರಡನೇ ಪಂದ್ಯದಲ್ಲಿ 151 ರನ್​ಗಳ ಅಮೋಘ ಜಯ ಸಾಧಿಸಿ 1-0 ಮುನ್ನಡೆ ಸಾಧಿಸಿದೆ.

ಹೆಡಿಂಗ್ಲೆ ಪಿಚ್ ಪಂದ್ಯದುದ್ದಕ್ಕೂ ವೇಗದ ಬೌಲರ್‌ಗಳಿಗೆ ಹೆಚ್ಚಿನ ಸಹಕಾರಿಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬ್ಯಾಟ್ಸ್‌ಮನ್‌ಗಳಿಗೂ ಪೂರಕವಾಗಿ ವರ್ತಿಸಲಿದೆ.