ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 29,164  ಮಂದಿಗೆ ಕೊರೋನಾ ಸೋಂಕು ಪತ್ತೆ…

Promotion

ನವದೆಹಲಿ,ನವೆಂಬರ್,17,2020(www.justkannada.in): ದೇಶದಲ್ಲಿ  ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 29,164 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.kannada-journalist-media-fourth-estate-under-loss

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಒಂದೇ ದಿನ 29,164 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 88,74,291ಕ್ಕೆ ಏರಿಕೆಯಾಗಿದೆ. ಮಹಾಮಾರಿ ಕೊರೋನಾಗೆ ಕಳೆದ 24 ಗಂಟೆಯಲ್ಲಿ 449 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,30,519ಕ್ಕೆ ಏರಿಕೆಯಾಗಿದೆ.india-single-day-29164-people-diagnosed-coronavirus

ಇನ್ನು ದೇಶದಲ್ಲಿ 4,53,401 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 40,791 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ನಿನ್ನೆಯೊಂದೇ ದಿನದಲ್ಲಿ 8,44,382 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 12,65,42,907 ಜನರಲ್ಲಿ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: india- single day–29,164 people – diagnosed -coronavirus.