ನಾಳೆ ಭಾರತ ಹಾಗೂ ಆಸ್ಟ್ರೇಲಿಯಾ 2ನೇ ಟಿ-20 ಪಂದ್ಯ

Promotion

ಬೆಂಗಳೂರು, ಸೆಪ್ಟೆಂಬರ್ 22 (www.justkannada.in): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟ20 ಸರಣಿಯ ಮೊದಲ ಪಂದ್ಯ ಸೋತ ಟೀಂ ಇಂಡಿಯಾ ನಾಳೆ (ಸೆ.23) 2ನೇ ಪಂದ್ಯ ಆಡಲಿದೆ.

ಈ ಪಂದ್ಯದಲ್ಲಿ ಭಾರತ ತಂಡ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ. ವಿಶ್ವಕಪ್ ದೃಷ್ಟಿಯಿಂದ ಬೌಲಿಂಗ್ ವಿಭಾಗದಲ್ಲಿ ಈ ಮೂರು ಬದಲಾವಣೆಗಳು ಅನಿವಾರ್ಯವಾಗಿದೆ.

ಟೀಮ್ ಇಂಡಿಯಾದ ವಿಕೆಟ್ ಟೇಕಿಂಗ್ ಬೌಲರ್ ಎನಿಸಿಕೊಂಡಿರುವ ಯುಜುವೇಂದ್ರ ಚಾಹಲ್ ಇತ್ತೀಚಿನ ದಿನಗಳಲ್ಲಿ ವಿಕೆಟ್ ಟೇಕರ್ ಎನಿಸಿಕೊಂಡಿಲ್ಲ. ಹೀಗಾಗಿ ಚಾಹಲ್ ಬದಲಿಗೆ ಆರ್ ಅಶ್ವಿನ್ ಆಡಬೇಕಿದೆ.

ಡೆತ್ ಓವರ್‌ನಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ದಾಳಿ ನಡೆಸಲು ಭುವನೇಶ್ವರ್ ಕುಮಾರ್ ಮತ್ತೊಮ್ಮೆ ವಿಫಲವಾಗಿದ್ದಾರೆ.  ಅವರ ಬದಲಿಗೆ  ದೀಪಕ್ ಚಾಹರ್  ಆಡುವ ಸಾಧ‍್ಯತೆ ಇದೆ.