2021-22ರಲ್ಲಿ ಭಾರತದ ಆರ್ಥಿಕತೆ ಹೆಚ್ಚು ಬೆಳವಣಿಗೆ: ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌

ನವದೆಹಲಿ, 17, 2020 (www.justkannada.im): ದೇಶದ ಅಭಿವೃದ್ಧಿ ದರಶೇ.1.9 ರಷ್ಟುನಿರೀಕ್ಷಿಸಲಾಗಿದ್ದು, 2021-22ರಲ್ಲಿಆರ್ಥಿಕತೆ ಹೆಚ್ಚು ಬೆಳವಣಿಗೆ ಕಾಣಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತದಾಸ್‌ ಹೇಳಿದ್ದಾರೆ.

ಮಾರಕ ಕೊರೋನಾ ವೈರಸ್ ಹಾವಳಿಯಿಂದಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಿದ್ದು, 2021-22ರಲ್ಲಿ ಆರ್ಥಿಕತೆ ಅತಿ ಹೆಚ್ಚು ಬೆಳವಣಿಗೆ ಕಾಣಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ಭಾರತದಲ್ಲಿ ಕೊರೋನಾ ಹಾವಳಿಯಿಂದಾಗಿ ದೇಶದ ಆರ್ಥಿಕತೆ ತೀವ್ರ ಹಿನ್ನಡೆ ಅನುಭವಿಸಿರುವ ಹಿನ್ನಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಗವರ್ನರ್‌ ಶಕ್ತಿಕಾಂತ ದಾಸ್‌ ಅವರು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮಾರಕ ಕೊರೋನಾ ವೈರಸ್ ಹಾವಳಿಯಿಂದಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಿದ್ದು, 2021-22ರಲ್ಲಿ ಆರ್ಥಿಕತೆ ಅತಿ ಹೆಚ್ಚು ಬೆಳವಣಿಗೆ ಕಾಣಲಿದೆ ಎಂದು ಹೇಳಿದರು.

1930ರ ನಂತರ ಇಡೀ ವಿಶ್ವ ಇಂತಹ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ವಿಶ್ವದ 9ಟ್ರಿಲಿಯನ್ ಅಮೆರಿಕನ್ ಡಾಲರ್‌ ನಷ್ಟು ಆರ್ಥಿಕತೆ ನಷ್ಟವಾಗಿದೆ. ಭಾರತದ ಜಿಡಿಪಿ ಸಹ ಶೇ.1.9 ಕ್ಕೆ ಕುಸಿದಿದೆ. ಹೀಗಾಗಿ ದೇಶದ ಆರ್ಥಿಕತೆಯನ್ನು ಮತ್ತೆ ಅಭಿವೃದ್ಧಿಯ ಪಥಕ್ಕೆ ತರಲು ಆರ್‌ಬಿಐ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ ಎಂದು ತಿಳಿಸಿದ್ದಾರೆ.