ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನೌಪಚಾರಿಕ ಒಪ್ಪಿಗೆ…

ಬೆಂಗಳೂರು,ನವೆಂಬರ್,18,2020(www.justkannada.in): ವಿಜಯ ನಗರ ಜಿಲ್ಲೆ ರಚನೆಯಾಗಬೇಕು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಇಟ್ಟಿದ್ದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಗುವ ಕಾಲ ಹತ್ತಿರ ಬಂದಿದೆ. ಹೌದು, ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ.kannada-journalist-media-fourth-estate-under-loss

ವಿಧಾನಸೌಧದಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. ಸಭೆ ಬಳಿಕ ಈ ಕುರಿತು ಮಾತನಾಡಿದ ಸಚಿವ ಮಾಧುಸ್ವಾಮಿ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನುಮೋದನೆ ನೀಡಲಾಗುವುದು. ಹೊಸದಾಗಿ ವಿಜಯನಗರ ಜಿಲ್ಲೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ಪ್ರತ್ಯೇಕ ವಿಜಯನಗರ ಜಿಲ್ಲೆ ಸ್ಥಾಪನೆಗೆ ಆನಂದ್ ಸಿಂಗ್ ಆಗ್ರಹಿಸಿದ್ದರು.  ಬಳ್ಳಾರಿ ಜಿಲ್ಲೆ ವಿಭಜನೆಗೆ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಆನಂದ್‌ ಸಿಂಗ್‌ ಅವರ ಬೇಡಿಕೆಗೆ ಮನ್ನಣೆ ನೀಡಿದ್ದಾರೆ.

Key words: Informal- Consent – Establishment – Vijayanagar- District-cabinet meeting