ಸಿದ್ಧರಾಮೋತ್ಸವಕ್ಕೆ ಹಣ ವೆಚ್ಚ ಮಾಡುವ ಬದಲು ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬಹುದು- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.

Promotion

ಶಿವಮೊಗ್ಗ ,ಜುಲೈ,19,2022(www.justkannada.in): ಸಿದ್ದರಾಮಯ್ಯ ಅವರ ಜನ್ಮ ದಿನಕ್ಕೆ  75 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇಷ್ಟು ವೆಚ್ಚ ಮಾಡುವ ಬದಲಿಗೆ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬಹುದು. ಇಷ್ಟೊಂದು ಆಡಂಬರ ಸಿದ್ದರಾಮಯ್ಯರಿಗೆ ಅಗತ್ಯವಿಲ್ಲ ಎಂದು ಸಿದ್ಧರಾಮೋತ್ಸವದ ಕಾರ್ಯಕ್ರಮದ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ,  ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮೋತ್ಸವದ ಮೂಲಕ ವ್ಯಕ್ತಿಪೂಜೆ ಶುರುವಾಗಿದ್ದು, ಬಿಜೆಪಿ ಟೀಕಿಸುವ ಸಿದ್ದರಾಮಯ್ಯ ಇದಕ್ಕೆ ಉತ್ತರ ನೀಡಲಿ. ಸಿದ್ದಾರಾಮೋತ್ಸವ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತದೆ ಕಾದು ನೋಡಿ. ಇದು ಸಿದ್ದರಾಮಯ್ಯ ಕೊನೆಯ ನಾಟಕ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆಂದು ಇನ್ನೂ ಫಿಕ್ಸ್ ಆಗಿಲ್ಲ. ದಿನಕೊಂದು ಕ್ಷೇತ್ರದಲ್ಲಿ ಸ್ಪರ್ಧೆ ಕುರಿತು ಚರ್ಚೆ ಮಾಡಲಾಗುತ್ತಿದೆ. ಇಂತಹ ಸಿದ್ದರಾಮಯ್ಯಗೆ ಆಡಂಬರ ಬೇಕೇ? ಎಂದು ಟೀಕಿಸಿದರು.

Key words: Instead – spending- money – Siddharamotsava-flood-house -Former minister -KS Eshwarappa.