ಮಳೆಹಾನಿ ಪ್ರದೇಶಕ್ಕೆ ತೆರಳುವಂತೆ ಉಸ್ತುವಾರಿ ಸಚಿವರಿಗೆ ಸೂಚನೆ: ಮಳೆಹಾನಿ ಸಂತ್ರಸ್ತರಿಗೆ ಪರಿಹಾರ- ಸಿಎಂ ಬೊಮ್ಮಾಯಿ.

Promotion

ಬೆಂಗಳೂರು,ಮೇ,21,2022(www.justkannada.in):  ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ತೆರಳುವಂತೆ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ್ದೇನೆ. ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ 18 ಜಿಲ್ಲೆಗಳಲ್ಲಿ ಮಳೆಯಾಗಿದೆ.  ಮಳೆಹಾನಿ ಪ್ರದೇಶಕ್ಕೆ ತೆರಳುವಂತೆ ಈಗಾಗಲೇ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಲಾಗಿದೆ. ಡಿಸಿಗಳ ಜತೆ ಸಚಿವ ಆರ್.ಅಶೋಕ್ ಸಭೆ ನಡೆಸಿದ್ದಾರೆ. ಮಳೆ ಹಾನಿ ಸಂಬಂಧ ಸಭೆ ನಡೆಸಲು ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿಗೆ ಹೋದ ಮೇಲೆ ಡಿಸಿಗಳ ಜತೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

ಮಳೆ ಅವಾಂತರದಿಂದ ಸಂಕಷ್ಟಕ್ಕೊಳಗಾದವರಿಗೆ  ಎನ್ ಡಿಆರ್ ಎಫ್ ಯೋಜನೆಯಡಿ ಪರಿಹಾರ ನೀಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

Key words: Instruct – Minister –rain-CM Bommai