ಭಾರತ ಪ್ರಜಾಪ್ರಭುತ್ವದ ಬಗ್ಗೆ ವಿದೇಶ ನೆಲದಲ್ಲಿ ಅಪಮಾನ: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ-ಸ್ಮೃತಿ ಇರಾನಿ ಆಗ್ರಹ.

ನವದೆಹಲಿ.ಮಾರ್ಚ್,15,2023(www.justkannada.in): ಭಾರತ ಪ್ರಜಾಪ್ರಭುತ್ವದ ಬಗ್ಗೆ ವಿದೇಶ ನೆಲದಲ್ಲಿ ಅಪಮಾನ ಮಾಡಿರುವ  ರಾಹುಲ್ ಗಾಂಧಿ ಕ್ಷಮೆಯಾಚಿಸಲಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಗ್ರಹಿಸಿದ್ದಾರೆ.

ಲಂಡನ್‌ನ ಕೇಂಬ್ರಿಡ್ಜ್ ವಿವಿಯಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು ಲೋಕಸಭೆ ರಾಜ್ಯಸಭೆ ಕಲಾಪದಲ್ಲೂ ಈ ವಿಚಾರ ಪ್ರಸ್ತಾಪವಾಗಿ ಆಡಳಿತ ಪಕ್ಷದ ಸದಸ್ಯರು ರಾಹುಲ್ ಗಾಂಧಿ ಕ್ಷಮೆಯಾಚಿಸಲು ಆಗ್ರಹಿಸಿದ್ದವು.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವವನ್ನ  ಪ್ರಶ್ನಿಸಿದ್ದಾರೆ. ವಿದೇಶಿ ನೆಲದಲ್ಲಿ ಅವಮಾನಿಸಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಪ್ರತಿಯೊಬ್ಬ ಭಾರತೀಯರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Key words: Insulting- Indian -democracy – Rahul Gandhi – apologise-Smriti Irani