ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಆಹ್ವಾನ.

Promotion

ಬೆಂಗಳೂರು,ಆಗಸ್ಟ್,4,2022(www.justkannada.in): ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಗೆ  ಕ್ಷೇತ್ರ ಹುಡುಕಾಟದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ.

ಹೌದು, ಕಿಸಾನ್ ಕಾಂಗ್ರೆಸ್ ಸಿದ್ಧರಾಮಯ್ಯ ಈ ಆಹ್ವಾನ ನೀಡಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆ‌ಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಕಣಕ್ಕಿಳಿಯುವಂತೆ  ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಿಸಾನ್ ಕಾಂಗ್ರೆಸ್ ಸೆಲ್  ಒತ್ತಾಯ ಮಾಡಿದೆ.

ಇಂದಿರಾಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು ಧೂಳಿಪಟ ಮಾಡುವಂತೆ ಕರ್ನಾಟಕ ಕಿಸಾನ್ ಕಾಂಗ್ರೆಸ್  ಆಗ್ರಹಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬದಾಮಿಯಲ್ಲಿ ಗೆಲುವು ಸಾಧಿಸಿದ ಸಿದ್ಧರಾಮಯ್ಯ ಇದೀಗ ಈ ಬಾರಿ ಚುನಾವಣೆಗೆ ಕ್ಷೇತ್ರ ಹುಡುಕಾಟದಲ್ಲಿದ್ದಾರೆ.

Key words: Invitation -former CM -Siddaramaiah – contest -Chikkamagaluru -Assembly -Constituency