20ಕ್ಕೂ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧೆಗೆ ನನಗೆ ಆಹ್ವಾನವಿದೆ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ-ಮಾಜಿ ಸಿಎಂ ಸಿದ್ಧರಾಮಯ್ಯ.

Promotion

ಬೆಂಗಳೂರು,ಮಾರ್ಚ್,21,2023(www.justkannada.in): ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಈ ಬಾರಿ ವಿಧಾನಸಭಾ ಚುನಾವಣೆಗೆ ಎಲ್ಲಿಂದ ಸ್ಪರ್ಧಿಸಲಿದ್ದಾರೆಂಬ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದ್ದು, ನಾಳೆ ಈ ಬಗ್ಗೆ ಸ್ಪಷ್ಟ ನಿಲುವು ಹೊರ ಬೀಳುವ ಸಾಧ್ಯತೆ ಇದೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ‍್ಧರಾಮಯ್ಯ, ಕೋಲಾರ ಕ್ಷೇತ್ರದ  ಜನರು ಪ್ರೀತಿಯಿಂದ ನನ್ನನ್ನ ಕೋಲಾರಕ್ಕೆ ಕರೆಯುತ್ತಿದ್ದಾರೆ.  ಕೋಲಾರ ಸೇರಿ 20 ಕ್ಷೇತ್ರಗಳಲ್ಲಿ ನನಗೆ ಸ್ಪರ್ಧಿಸಲು ಆಹ್ವಾನವಿದೆ. ನನ್ನ ಸ್ಪರ್ಧೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳಿಲ್ಲ. ಆದರೆ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧ ಎಂದರು.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿಯಿಂದ ಟೀಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಬಿಜೆಪಿಯವರು ಸೋಲಿನ ಭೀತಿಯಿಂದ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

Key words: invited – contest – more than -20 Constituency-Former CM-Siddaramaiah