ಫೆಬ್ರವರಿ 12, 13ರಂದು ಬೆಂಗಳೂರಿನಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ

ಬೆಂಗಳೂರು, ಜನವರಿ 12, 2022 (www.justkannada.in): ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ.

ಈ ಬಾರಿ ಐಪಿಎಲ್ ಪಂದ್ಯಾವಳಿಗೆ ಹೊಸದಾಗಿ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಹೊಸದಾಗಿ ಸೇರ್ಪಡೆಯಾಗಿವೆ. ಹೀಗಾಗ ಹರಾಜು ಪ್ರಕ್ರಿಯೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಈ ತಂಡದ ಫ್ರಾಂಚೈಸಿಗಳಿಗೆ ತಮ್ಮ ಡ್ರಾಫ್ಟ್ ಪಿಕ್ ಗಳನ್ನು ಅಂತಿಮಗೊಳಿಸಲು ಬಿಸಿಸಿಐ ಇಂದು ಔಪಚಾರಿಕ ಅನುಮತಿ ನೀಡಿದೆ.

ಈ ಸಂಬಂಧ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಮಾಹಿತಿ ನೀಡಿದ್ದು, ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ಐಪಿಎಲ್ ಹರಾಜು ನಡೆಯಲಿದೆ ಎಂದು ತಿಳಿಸಿದ್ದಾರೆ.