ಐಪಿಎಲ್: ಇಂದು ರಾಯಲ್ ಚಾಲೆಂಜರ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ಫೈಟ್

Promotion

ಬೆಂಗಳೂರು, ಸೆಪ್ಟೆಂಬರ್ 20, 2021 (www.justkannada.in): ಐಪಿಎಲ್ ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಲಿದೆ.

ಈವರೆಗೂ RCB ಹಾಗೂ KKR ಒಟ್ಟು 28 ಬಾರಿ ಮುಖಾಮುಖಿಯಾಗಿದ್ದಾರೆ. 18 ಪಂದ್ಯಗಳಲ್ಲಿ ಕೆಕೆಆರ್ ಜಯಗಳಿಸಿದ್ದು, 13 ಪಂದ್ಯದಲ್ಲಿ ಸೋಲನುಭವಿಸಿದೆ.

ಸದ್ಯದ ಪಾಯಿಂಟ್ಸ್ ಟೇಬಲ್ ನಲ್ಲಿ RCB ಮೂರನೇ ಸ್ಥಾನದಲ್ಲಿದ್ದರೆ, ಕೆಕೆಆರ್ ತಂಡ ಏಳನೇ ಸ್ಥಾನದಲ್ಲಿದೆ. ಆರ್ ಸಿಬಿ ಒಟ್ಟು 7 ಪಂದ್ಯಗಳನ್ನಾಡಿದ್ದು, 5 ಪಂದ್ಯದಲ್ಲಿ ಗೆಲುವು ಸಾಧಿಸಿ, 2 ಪಂದ್ಯದಲ್ಲಿ ಸೋಲು ಕಂಡಿತ್ತು.

ಕೆಕೆಆರ್ ತಂಡ ಏಳು ಪಂದ್ಯಗಳನ್ನಾಡಿದ್ದು, ಕೇವಲ ಎರಡು ಪಂದ್ಯಗಳಲ್ಲಿ ಅಷ್ಟೇ ಜಯಗಳಿಸಿದೆ. ಉಳಿದ ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ಬ್ರೇಕ್ ಬಳಿಕ ಮತ್ತೆ ಕಣಕ್ಕಿಳಿಯಲಿರುವ ಉಭಯ ತಂಡಗಳ ಆಟಗಾರರು ಗೆಲುವಿಗಾಗಿ ಸೆಣೆಸಾಟ ನಡೆಸಲಿದ್ದಾರೆ..