ಐಪಿಎಲ್ ಸಂಡೇ ವಾರ್: ರಾಜಸ್ಥಾನ ರಾಯಲ್ಸ್ ವರ್ಸಸ್ ಕಿಂಗ್ಸ್ ಪಂಜಾಬ್

Promotion

ಬೆಂಗಳೂರು, ಸೆಪ್ಟೆಂಬರ್ 27, 2020 (www.justkannada.in): ಐಪಿಎಲ್ ಪಂದ್ಯಾವಳಿಯಲ್ಲಿ ಇಂದು ರಾತ್ರಿ ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಗೆಲುವಿಗಾಗಿ ಸೆಣೆಸಾಡಲಿವೆ.

ಕೆ.ಎಲ್. ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು 2 ಪಂದ್ಯಗಳನ್ನಾಡಿದ್ದು, ಒಂದು ಗೆಲುವು ಹಾಗೂ ಮತ್ತೊಂದು ಸೋಲು ಕಂಡಿವೆ. ಇನ್ನು ರಾಜಸ್ಥಾನ ರಾಯಲ್ಸ್ ಮೊದಲ ಪಂದ್ಯದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿತ್ತು.

ಹೀಗಾಗಿ ಶಾರ್ಜಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಇಂದು ರಾತ್ರಿ ಸಿಕ್ಸರ್ ಹಬ್ಬವನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿರುವ ಕಿಂಗ್ಸ್ ಇಲೆವನ್ ಪಂಜಾಬ್ ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿದೆ.

ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್