ನೀರಾವರಿ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ: ತನಿಖೆ ಅಗತ್ಯವಿಲ್ಲ ಎಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜೂನ್,20,2021(www.justkannada.in):  ನೀರಾವರಿ ಇಲಾಖೆಯ ಟೆಂಡರ್ ನಲ್ಲಿ ಭಾರಿ ಅವ್ಯವಹಾರ ನಡೆದಿದ್ದು ತನಿಖೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ನೀರಾವರಿ ಇಲಾಖೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ.  ಸತ್ಯಾಸತ್ಯತೆ ಗೊತ್ತಾದ ಮೇಲೆ ತನಿಖೆ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.jk

ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ನೀರಾವರಿ ಇಲಾಖೆಯ  ಟೆಂಡರ್ ಹಿಂದಿನ ಸರ್ಕಾರಗಳಲ್ಲಿನ ಟೆಂಡರ್ ಪ್ರಕ್ರಿಯೆಯಂತೆಯೇ ನಡೆದಿದೆ. ಕೆಟಿಟಿಪಿ ಕಾಯ್ದೆ ಪ್ರಕಾರ ಟೆಂಡರ್ ನಡೆದಿದ್ದು ಎಲ್ಲವೂ ಪಾರದರ್ಶಕವಾಗಿವೆ. ಇಲಾಖೆ ಕಾರ್ಯದರ್ಶಿಯೇ ಸತ್ಯಾಸತ್ಯತೆ ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಮೇಲೆ ತನಿಖೆ ಅಗತ್ಯವಿಲ್ಲ. ಪ್ರತಿಪಕ್ಷಗಳು ಆರೋಪ ಮಾಡುವುದು ಸಹಜ ಎಂದು  ಸ್ಪಷ್ಟನೆ ನೀಡಿದರು.

ಶಾಸಕ ಅರವಿಂದ್ ಬೆಲ್ಲದ್ ರಿಂದ ಫೋನ್ ಕದ್ದಾಲಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಬಸವರಾಜ ಬೊಮ್ಮಾಯಿ, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಶಾಸಕ ಅರವಿಂದ್ ಬೆಲ್ಲದ್ ರಿಂದಲೂ ಮಾಹಿತಿ ಕಲೆ ಹಾಕಿದ್ದಾರೆ ಎಂದರು.

Key words: Irrigation –Department-Home Minister -Basavaraja Bommai – no need – investigation.