ಗೋವಾದಲ್ಲಿನ ಗೋವು ಬಿಜೆಪಿಯವರಿಗೆ ಮಾತೆ ಅಲ್ಲವೇ: ಸಿ.ಎಂ.ಇಬ್ರಾಹಿಂ ವ್ಯಂಗ್ಯ

Promotion

ಬೆಂಗಳೂರು, ಡಿಸೆಂಬರ್ 04, 2022 (www.justkannada.in): ಬಿಜೆಪಿ ಗೋವಾದಲ್ಲಿ ಯಾಕೆ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನಿಸಿದ್ದಾರೆ.

ಗೋವನ್ನು ಅವ್ವ, ಮಾತೆ ಎನ್ನುವ ಬಿಜೆಪಿ ಗೋವಾದಲ್ಲಿ ಯಾಕೆ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿಲ್ಲ. ಗೋವಾದ ಗೋವು ಬಿಜೆಪಿಯವರಿಗೆ ಅವ್ವ ಅಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೋವಾದಲ್ಲಿ ಗೋಹತ್ಯೆ ಜಾರಿ ಮಾಡಿದರೆ ಅಲ್ಲಿರುವ ಕ್ರೈಸ್ತರು ಹೊಡೆಯುತ್ತಾರೆ. ಗೋವಾದಿಂದ ದನದ ಮಾಂಸ ರಾಜ್ಯಕ್ಕೆ ಬರುತ್ತಿದೆ. ಅದನ್ನು ಯಾಕೆ ತಡೆಯುತ್ತಿಲ್ಲ ಎಂದು ಕಿಡಿಕಾರಿದರು.

ಚುನಾವಣೆ ಹತ್ತಿರ ಇರುವುದರಿಂದ ಸೋಲುವ ಭೀತಿಯಲ್ಲಿರುವ ಬಿಜೆಪಿ, ಗೋವು ಹಾಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧದ ಹೆಸರಿನಲ್ಲಿ ಮತ ಧೃವೀಕರಣ ಮಾಡಲು ಹೊರಟಿದೆ ಎಂದು ದೂರಿದರು.