ಕಾಂಗ್ರೆಸ್ ಸೇರ್ಪಡೆ ವಿಚಾರ ಮುಗಿದ ಅಧ್ಯಾಯ- ಸಚಿವ ವಿ.ಸೋಮಣ್ಣ ಸ್ಪಷ್ಟನೆ.

Promotion

ಚಾಮರಾಜನಗರ, ಮಾರ್ಚ್‌, 20,2023(www.justkannada.in):  ಕಾಂಗ್ರೆಸ್ ಸೇರ್ಪಡೆ ವಿಚಾರ ಮುಗಿದ ಅಧ್ಯಾಯ  ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ವಿ.ಸೋಮಣ್ಣ, ನಾನು ಡೈರೆಕ್ಟ್ ರಾಜಕಾರಣಿ, ಏನೇ ಇದ್ದರೂ ನೇರವಾಗಿ ಹೇಳುತ್ತೇನೆ. ಕಾಂಗ್ರೆಸ್ ಗೆ ಸೇರುವ ವಿಷಯ ನನ್ನ ತಲೆಯಲ್ಲೇ ಇಲ್ಲ. ಅವೆಲ್ಲಾ ಮುಗಿದ ಅಧ್ಯಾಯ ಎಂದು ತಿಳಿಸಿದರು.

ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಸ್ಪರ್ಧೆ  ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ರಾಜ್ಯದ 224 ಕ್ಷೇತ್ರಗಳಲ್ಲಿ ಸೋಮಣ್ಣಗೆ ಹಲವಾರು ಕ್ಷೇತ್ರಗಳ ಪರಿಚಯ ಇದೆ. ಜಿಲ್ಲೆಯಿಂದ ಸ್ಪರ್ಧಿಸುವ ಯೋಚನೆ ಇಲ್ಲ. ಚಾಮರಾಜನಗರ ನನ್ನ ಪ್ರೀತಿಯ ಜಿಲ್ಎಲ ಹೌದು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

Key words:  issue – Congress –joining- over – Minister -V. Somanna