ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಐಟಿ ದಾಳಿ : ದಾಖಲೆ ಪರಿಶೀಲನೆ.

Promotion

ಬೆಂಗಳೂರು, ನವೆಂಬರ್ 21,2023(www.justkannada.in):  ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾಣಿ ಬೆಂಗಳೂರಿನಲ್ಲಿ  ಉದ್ಯಮಿಗಳ ಮನೆ ಮೇಲೆ ಐಟಿ ದಾಳಿಯಾಗಿದೆ.

ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 7 ಗಂಟೆಗೆ ಕಾರ್ ನಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವರ ಅಪಾರ್ಟ್ಮೆಂಟ್ ಮೇಲೆ ದಾಳಿ   ನಡೆಸಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

Key words: IT- attack – Bengaluru- Document – Verification.