ಸಚಿವ ಡಿ.ಕೆ ಶಿವಕುಮಾರ್  ಬಿಗ್ ಶಾಕ್ : ಐಟಿ ದಾಳಿ ಪ್ರಕರಣದಿಂದ ಹೆಸರು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾ…

Promotion

ಬೆಂಗಳೂರು,ಜೂ,25,2019(www.justkannada.in):  ದೆಹಲಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಕೋರಿ ಸಚಿವ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರ ಹೆಸರನ್ನ ಪ್ರಕರಣದಿಂದ ಕೈಬಿಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಮೂರು ಪ್ರಕರಣದಲ್ಲಿ ಆರೋಪ ಮುಕ್ತರಾಗಿದ್ದ ಸಚಿವ ಡಿಕೆ ಶಿವಕುಮಾರ್ ಅವರಿಗೆ ಈ ಪ್ರಕರಣದಲ್ಲಿ ಭಾರಿ ಹಿನ್ನಡೆಯಾಗಿದೆ.

ಆಗಸ್ಟ್ 2017ರಲ್ಲಿ ಸಚಿವ ಡಿಕೆ ಶಿವಕುಮಾರ್ ನಿವಾಸದ ಮೇಲೆ ಹಾಗೂ ಕರ್ನಾಟಕದ ನಿವಾಸದ ಮೇಲೂ  ಐಟಿ ದಾಳಿಯಾಗಿತ್ತು.  ಪ್ರಕರಣದಿಂದ ತಮ್ಮ ಹೆಸರನ್ನ ಕೈಬಿಡುವಂತೆ ಕೋರಿ ಸಚಿವ ಡಿ.ಕೆ ಶಿವಕುಮಾರ್ ಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ತೀರ್ಪುನ್ನು ಇಂದಿಗೆ ಕಾಯ್ದಿರಿಸಿದ್ದರು.

ಇಂದು ಅರ್ಜಿ ವಿಚಾರಣೆ ತೀರ್ಪುನ್ನು ನೀಡಿದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಸಚಿವ ಡಿಕೆ ಶಿವಕುಮಾರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ದೂರಿನ ವಿಚಾರಣೆ ಅಥಾವ ತನಿಖೆಯನ್ನು ಮುಂದುರಿಸುವಂತೆ ಆದೇಶ ನೀಡಿದೆ. ಸಚಿವ ಡಿ.ಕೆ ಶಿವಕುಮಾರ್ ಕೋರ್ಟ್ ಗೆ ಖುದ್ದು ಹಾಜರಾಗಿದ್ದರು.

Key words:  IT attack -case- Minister- DK Shivakumar  -Petition -dismissed -court