ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಪ್ತನ ನಿವಾಸದ ಮೇಲೆ ಐಟಿ ದಾಳಿ…

Promotion

ಹಾಸನ,ಫೆ,12,2020(www.justkannada.in):  ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಆಪ್ತ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಆಪ್ತ ಶಿವಕುಮಾರ್ ನಿವಾಸದ ಮೇಲೆ ನಿನ್ನೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.  8 ಮಂದಿ ಐಟಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿ ಮಧ್ಯರಾತ್ರಿವರೆಗೆ ಶಿವಕುಮಾರ್ ಅವರ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಅಲ್ಲದೆ ಶಿವಕುಮಾರ್ ಗೆ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರಾಗಿರುವ ಶಿವಕುಮಾರ್ ನಿವಾಸದ ಮೇಲೆ ಈ ಹಿಂದೆಯೂ ಐಟಿ ದಾಳಿಯಾಗಿತ್ತು.

Key words: IT attack -former minister- HD Ravanna-friend-residence