ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ದಾಖಲೆ ಪರಿಶೀಲನೆ.

Promotion

ಬೆಂಗಳೂರು,ಅಕ್ಟೋಬರ್,4,2023(www.justkannada.in):  ತೆರಿಗೆ ವಂಚನೆ ಆರೋಪ  ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು ನಗರದ 10ಕ್ಕೂ ಹೆಚ್ಚು ಕಡೆಗಳಲ್ಲಿ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ತೆರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಮೇಲೆ ದಾಳಿ‌ಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಮನೆ ಹಾಗೂ ಕಚೇರಿಗಳ‌ಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Key words: IT- raid – more than- 10 places – Bangalore- document- verification.