ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್: ಡಾ. ಜಿ. ಪರಮೇಶ್ವರ್ ಮತ್ತು ಆರ್.ಎಲ್ ಜಾಲಪ್ಪ ಶಿಕ್ಷಣ ಸಂಸ್ಥೆ ಮೇಲೆ ದಾಳಿ ದಾಖಲೆ ಪರಿಶೀಲನೆ…

Promotion

ತುಮಕೂರು/ಕೋಲಾರ,ಅ,10,2019(www.justkannada.in): ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮುಂದುವರೆದಿದ್ದು, ಇಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮತ್ತು ಆರ್.ಎಲ್ ಜಾಲಪ್ಪ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಇಂದು ಬೆಳ್ಳಂಬೆಳಿಗ್ಗೆಯೇ ಐಟಿ ಅಧಿಕಾರಿಗಳು ಈ ಇಬ್ಬರು ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ. ತುಮಕೂರಿನ ಡಾ.ಜಿ.ಪರಮೇಶ್ವರ್ ಮಾಲೀಕತ್ವದ ಸಿದ್ಧಾರ್ಥ್ ಇಂಜಿನಿಯರಿಂಗ್ ಕಾಲೇಜು ಮತ್ತು ಡಿಗ್ರಿ ಕಾಲೇಜುಗಳ ಮೇಲೆ ಐಟಿ ದಾಳಿ ನಡೆಸಿದೆ. ಇನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸದ ಮೇಲೂ ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಹಾಗೆಯೇ ಕೋಲಾರದಲ್ಲಿರುವ ಕಾಂಗ್ರೆಸ್ ಮುಖಂಡ ಆರ್.ಎಲ್ ಜಾಲಪ್ಪ ಅವರ ಒಡೆತನದ ಆರ್.ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನ ಮೇಲೆಯೂ ಐಟಿ ದಾಳಿಯಾಗಿದೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.  ಇತ್ತ ನೆಲಮಂಗಲ ಪುರಸಭೆ ಜೆಡಿಎಸ್ ಸದಸ್ಯ ಶಿವಕುಮಾರ್ ನಿವಾಸದ ಮೇಲೂ ಐಟಿ ದಾಳಿಯಾಗಿದೆ.

Key words: IT shock – Congress –leaders-Dr. G. Parameswar – RL Jalappa- attack – education institute.