ಆಂಧ್ರಪ್ರದೇಶದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಿಸಿ ಜಗನ್ ಆದೇಶ

ಬೆಂಗಳೂರು, ಜೂನ್ 08, 2021 (www.justkannada.in): ಆಂಧ್ರಪ್ರದೇಶದಲ್ಲಿ ಜೂನ್ 20 ರವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಘೋಷಣೆ ಹೊರಡಿಸಿದ್ದಾರೆ. ಕರ್ಫ್ಯೂ ಸಡಿಲಿಕೆಯ ಸಮಯವನ್ನು ಜೂನ್ 10 ರ ನಂತರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಕ್ಕೆ ಬದಲಾಯಿಸಲಾಗಿದೆ.

ಸರ್ಕಾರಿ ಕಚೇರಿಗಳ ಕೆಲಸದ ಸಮಯ ಜೂನ್ 10 ರಿಂದ ಮಧ್ಯಾಹ್ನ 2 ರವರೆಗೆ ಇರಲಿದೆ ಎಂದು ಜಗನ್ ತಿಳಿಸಿದ್ದಾರೆ.

ಕೋವಿಡ್ ನ ಮೂರನೇ ಅಲೆಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಗನ್  ಚರ್ಚಿಸಿದ್ದಾರೆ.

ಕೋವಿಡ್ ನ ಮೂರನೇ ಅಲೆಯನ್ನು ಪರಿಗಣಿಸಿ ಪೌಷ್ಟಿಕಾಂಶ ಮತ್ತು ಲಸಿಕೆ ಕಾರ್ಯಕ್ರಮಗಳನ್ನು ಮುಂದುವರಿಸಬೇಕು ಎಂದು ಜಗನ್ ಸೂಚಿಸಿದ್ದಾರೆ.