ಜಗದೀಶ್ ಶೆಟ್ಟರ್ ಗೆಲ್ತಾರೆ: ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರುತ್ತೆ- ರಕ್ತದಲ್ಲಿ ಪತ್ರ ಬರೆದ ಅಭಿಮಾನಿ.

Promotion

ಹುಬ್ಬಳ್ಳಿ,ಏಪ್ರಿಲ್,27,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಪ್ರಚಾರದ ಭರಾಟೆ ಮತ್ತಷ್ಟು ಬಿರುಸುಗೊಂಡಿದ್ದು ಬಿರುಬಿಸಿಲಿನ ನಡುವೆಯೂ ಅಬ್ಬರದ ಕ್ಯಾಂಪೇನ್ ಜೋರಾಗಿದೆ. ಈ ಮಧ್ಯೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರ ಅಭಿಮಾನಿಯೊಬ್ಬರು ರಕ್ತದಲ್ಲಿ ಪತ್ರ ಬರೆದು ಸುದ್ದಿಯಾಗಿದ್ದಾರೆ.

ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸುತ್ತಾರೆ : ಕಾಂಗ್ರೆಸ್ ಈಬಾರಿ ಅಧಿಕಾರಕ್ಕೆ ಬರುತ್ತೆ ಎಂದು ಕಾಂಗ್ರೆಸ್ ಅಭಿಮಾನಿ ಮಂಜುನಾಥ ಎಂಬುವವರು ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಮಾನ್ಯ ಜಗದೀಶ್ ಶೆಟ್ಟರ್ 100ಕ್ಕೆ 100ರಷ್ಟುಯ ವಿಜಯಶಾಲಿಯಾಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತದೆ ಎಂದು ಮಂಜುನಾಥ್ ರಕ್ತದಲ್ಲಿ ಪತ್ರ ಬರೆದು ಶುಭ ಹಾರೈಸಿದ್ದು ಈ ಪತ್ರ ಈಗ ಸಾಕಷ್ಟು ವೈರಲ್ ಆಗುತ್ತಿದೆ.

Key words: Jagdish Shettar –wins-Congress – power  -fan – letter – blood.